ಸೌಜನ್ಯ ಪರ ಹೋರಾಟ ಸಮಿತಿಯಿಂದ ನೋಟ ಮತ ಚಲಾಯಿಸಲು ಅಭಿಯಾನ

ಮಂಗಳೂರು : ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ನಮಿತಿ ಮುಖಂಡ ಗಿರೀಶ್ ಮಟ್ಟನ್ನನವರ್ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ,ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ನೋಟ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಪ್ರಕರಣ ನಡೆದು 11 ವರ್ಷ ಕಳೆದರೂ ಯಾವುದೇ ರಾಜಕೀಯ ಪಕ್ಷಗಳು ಸ್ಪಂದನೆ ನೀಡಿಲ್ಲ. ಆದ್ದರಿಂದ ಈ ಬಾರಿ ನೋಟಕ್ಕೆ ಮತಚಲಾಯಿಸಿ ಗಮನ ಸೆಳೆಯಲು ಉದ್ದೇಶಿಸಲಾಗಿದೆ ಎಂದ ಅವರು, ಏ5 ರಂದು ದ.ಕ. ಹಾಗೂ ಉಡುಪಿಯಲ್ಲಿವಿಧಾನಸಭಾ ಕ್ಷೇತ್ರವಾರು ಅಭಿಯಾನ ಹಮ್ಮಿಕೊಳ್ಳುತ್ತಿದ್ದು, ಸುಳ್ಯದಲ್ಲಿ ಎ. 24 ರಂದು ನೋಟ ಜನಜಾಗೃತಿ ಸಭೆ ಹಮ್ಮಿಕೊಳ್ಳಲಾಗಿದೆ ಎಂದರು.



































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top