ಪುತ್ತೂರು: ನಗರಸಭೆ ಆರೋಗ್ಯ ನಿರೀಕ್ಷಕಿ ವರಲಕ್ಷ್ಮೀ ಅವರ ಪತಿ ರಘು ಡಿ. (45) ಹೃದಯಾಘಾತದಿಂದ ನಿಧನರಾಗಿದ್ದಾರೆ.
ವರಲಕ್ಷ್ಮಿ ಅವರು ಮಂಡ್ಯ ಮೂಲದವರಾಗಿದ್ದು, ಅವರ ಪತಿ ರಘು ಅವರು ಮಂಡ್ಯದಲ್ಲಿ ಫೋಟೋಗ್ರಫಿ ಮಾಡುತ್ತಿದ್ದರು. ಶುಕ್ರವಾರ ಸಂಜೆ ಪುತ್ತೂರಿನ ಬನ್ನೂರಿನಲ್ಲಿರುವ ಮನೆಯಲ್ಲಿ ಎದೆನೋವು ಕಾಣಿಸಿದೆ. ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ಕರೆತಂದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರೆನ್ನಲಾಗಿದೆ.
ಮೃತರು ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ.