ಪುತ್ತೂರು: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಪ್ರಚಾರ ಕಾರ್ಯ ಭರ್ಜರಿಯಿಂದ ನಡೆಯುತ್ತಿದ್ದು,ಈ ನಡುವೆ ತಾಲೂಕಿನ ಚಿಕ್ಕಮುಡ್ನೂರು ಗ್ರಾಮದಲ್ಲಿ ಚುನಾವಣಾ ಬಹಿಷ್ಕಾರ ಬ್ಯಾನರ್ ಅಳವಡಿಸಿದ್ದಾರೆ.
ಚಿಕ್ಕಮುಡ್ನೂರು ಗ್ರಾಮದ ಏಣಿಮುಗೇರು ಬಡಕಾಯದೇ ಎಂಬಲ್ಲಿ ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿದ್ದೇವೆ ಎಂದು ಗ್ರಾಮಸ್ಥರು ಬ್ಯಾನರ್ ಅಳವಡಿಸಿ ಚುನಾವಣಾ ಬಹಿಷ್ಕಾರ ಮಾಡಿದ್ದಾರೆ.
135 ಮತಗಟ್ಟೆಯಲ್ಲಿಈ ಬ್ಯಾನರ್ ಅಳವಡಿಸಲಾಗಿದೆ.