ಕೆಯ್ಯೂರಿನಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ

ಪುತ್ತೂರು: ಪುತ್ತೂರು: ರಾಜ್ಯದಲ್ಲಿ‌ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಪ್ರತೀ ಕುಟುಂಬಕ್ಕೆ ತಲಾ 30 ಸಾವಿರ ಹಣ ವಿವಿಧ ರೂಪದಲ್ಲಿ ದೊರಕಿದೆ ಎಂದು ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ ಹೇಳಿದರು.

ಅವರು ಕೆಯ್ಯೂರು ಗ್ರಾಮದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದರು.

ಕಾಂಗ್ರೆಸ್ ಎಂದಿಗೂ ಜನತೆಗೆ ದ್ರೋಹ ಮಾಡಿಲ್ಲ. ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಪಕ್ಷ ಕಾಂಗ್ರೆಸ್ ಎಂದಿಗೂ ಬಡವರ ಹಾಗೂ ನೊಂದವರ ಪರವಾಗಿಯೇ ಕೆಲಸ ಮಾಡಲಿದೆ. ಗ್ಯಾರಂಟಿ ಯೋಜನೆಯನ್ನು ಅಧಿಕಾರಕ್ಕೆ ಬಂದ ಒಂದೇ ತಿಂಗಳಲ್ಲಿ ಜಾರಿ ಮಾಡಿದ್ದೇವೆ. ಗ್ಯಾರಂಟಿ ಫಲಾನುಭವಿಗಳು ಕಾಂಗ್ರೆಸ್ ಗೆ ವೋಟು ಹಾಕುತ್ತಾರೆ ಎಂಬ ಸಂಪೂರ್ಣ ನಂಬಿಕೆ ನಮ್ಮಲ್ಲಿದೆ ಎಂದು ಹೇಳಿದರು.



































 
 

ಬಡವರು ನೆಮ್ಮದಿಯಾಗಿ ಬದುಕಬೇಕಿದ್ದರೆ ಕಾಂಗ್ರೆಸ್ ಅಧಿಕಾರಕ್ಕೆ ಬರಲೇಬೇಕು. ಇಲ್ಲವಾದರೆ ಬಹಳ ಕಷ್ಟವಿದೆ ‌ಎಂದು ಶಾಸಕರು ಹೇಳಿದರು. ನಮ್ಮ‌ಒಂದು ವೋಟು ನಮ್ಮ‌ಬದುಕನ್ನೇ‌ ಬದಲಿಸಬಹುದು. ‌ಬಡವರ ಪರ ಮತ್ತು ಅಭಿವೃದ್ದಿ ಪರ ಇರುವ ಕಾಂಗ್ರೆಸ್ಸನ್ನು ಬೆಂಬಲಿಸಿ ಎಂದು‌ ಮನವಿ ಮಾಡಿದರು.

ವೇದಿಕೆಯಲ್ಲಿ‌ಕೆಯ್ಯೂರು ವಲಯಾಧ್ಯಕ್ಷರಾದ ಎ ಕೆ ಜಯರಾಮ ರೈ, ಉಸ್ತುವಾರಿಗಳಾದ ಕೃಷ್ಣಪ್ರಸಾದ್ ಅಳ್ವ, ಮಹೇಶ್ ರೈ ಅಂಕೊತ್ತಿಮಾರ್, ಮುರಳೀಧರ್ ರೈ ಮಠಂತಬೆಟ್ಟು ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top