ಚಿಕ್ಕಬಳ್ಳಾಪುರ : ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಹಿರಿಯ ನಾಯಕ ವೀರಪ್ಪ ಮೊಯಿಲಿ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.
ಲೋಕಸಭೆ ಚುನಾವಣೆ ಹೊತ್ತಲ್ಲೆ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿರುವುದು ಕಾಂಗ್ರೆಸ್ ವಲಯದಲ್ಲಿ ಆತಂಕ ಮೂಡಿದೆ.
ವೀರಪ್ಪ ಮೊಯಿಲಿ ಅವರು ಈ ಬಾರಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಹೈಕಮಾಂಡ್ ಕೊನೆ ಕ್ಷಣದಲ್ಲಿ ವೀರಪ್ಪ ಮೊಯಿಲಿ ಬದಲಿಗೆ ಯುವ ನಾಯಕ ರಕ್ಷಾ ರಾಮಯ್ಯರಿಗೆ ನೀಡಿತ್ತು. ಇದರಿಂದ ನಿರಾಸೆಗೊಂಡಿರುವ ಮೊಯಿಲಿ ಇದೀಗ ಅಂತಿಮವಾಗಿ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದು ರಕ್ಷಾ ರಾಮಯ್ಯರಿಗೆ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ.