ಸವಣೂರು: ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ 2023-24ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರ ಏಳು ದಿನಗಳ ಕಾಲ ಕಡಬ ತಾಲೂಕಿನ ನೇಲ್ಯಡ್ಕ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದ್ದು, ಸಮಾರೋಪ ಸಮಾರಂಭ ಏ.6 ರಂದು ನಡೆಯಿತು.
ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಕೆ.ಸೀತಾರಾಮ ರೈ ಸವಣೂರು ದೀಪ ಬೆಳಗಿಸಿ ಉದ್ಘಾಟಿಸಿದರು. ನೇಲ್ಯಡ್ಕ ಶಾಲಾಭಿವೃದ್ಧಿ ಸಮಿತಿ ಹಾಗೂ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ರಘುನಾಥ್ ರೈ ಅಧ್ಯಕ್ಷತೆ ವಹಿಸಿದ್ದರು.
ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಲಕ್ಷ್ಮೀಕಾಂತ ರೈ ಸಮಾರೋಪ ಭಾಷಣ ಮಾಡಿ, ರಾಷ್ಟ್ರ ನಿರ್ಮಾಣದಲ್ಲಿ ನವ ಯುವಕರ ಪಾತ್ರದ ಬಗ್ಗೆ ಉಪನ್ಯಾಸ ನೀಡಿದರು.
ಮುಖ್ಯ ಅತಿಥಿಗಳಾಗಿ ಪುರುಷೋತ್ತಮ ಬಿ., ನೇಮಿರಾಜ ಪಲ್ಲೋಡಿ ಭಾಗವಹಿಸಿದ್ದರು. ದೇವಿಪ್ರಸಾದ್ ಗೆಜ್ಜೆ, ಹರ್ಷಿತ್ ಕಾರ್ಜ, ಸುರೇಶ್ ಎನ್. ಉಪಸ್ಥಿತರಿದ್ದರು. ಯೋಜನಾಧಿಕಾರಿ ನಿರಂಜನ್ ವಿ., ಸಹ ಯೋಜನಾಧಿಕಾರಿಗಳಾದ ಸುಮಾ ಎಸ್., ವೆಂಕಟ್ರಮಣ ಎನ್. ಉಪಸ್ಥಿತರಿದ್ದರು.