ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ವರ್ಷಾವಧಿ ಜಾತ್ರೋತ್ಸವಕ್ಕೆ ಬುಧವಾರ ಬೆಳಿಗ್ಗೆ ಧ್ವಜಾರೋಹಣದ ಮೂಲಕ ವೈಭವದ ಚಾಲನೆ ನೀಡಲಾಯಿತು.
ಬೆಳಿಗ್ಗೆ 9.25 ನಂತರದ ವೃಷಭ ಲಗ್ನದಲ್ಲಿ ಭಕ್ತಾದಿಗಳ ಜಯಘೋಷದೊಂದಿಗೆ ದೇವಸ್ಥಾನದ ಪ್ರಧಾನ ಅರ್ಚಕರಾದ ವಿ.ಎಸ್.ಭಟ್ ಹಾಗೂ ವಸಂತ ಕೆದಿಲಾಯವರು ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ, ವ್ಯವಸ್ಥಾಪನಾ ಸಮಿತಿ ನಿಕಟಪೂರ್ವ ಅಧ್ಯಕ್ಷರು, ಸದಸ್ಯರು, ಅರ್ಚಕರು, ಸಿಬ್ಬಂದಿಗಳು, ಭಕ್ತಾದಿಗಳು ಸಹಸ್ರಾರು ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ಜಾತ್ರೋತ್ಸವಕ್ಕೆ ಪೂರ್ವಭಾವಿಯಾಗಿ ಏ.1 ರಂದು ಗೊನೆ ಮುಹೂರ್ತ ನಡೆದಿತ್ತು. ಗೊನೆ ಮುಹೂರ್ತ ನಡೆದು ಹತ್ತನೇ ದಿನಕ್ಕೆ ಧ್ವಜಾರೋಹಣ ನೆರವೇರುವುದು ಸಂಪ್ರದಾಯ.