ಮಂಗಳೂರು: ಮುಸ್ಲಿಮರ ಪವಿತ್ರ ರಂಝಾನ್ ಹಬ್ಬದ ಪ್ರಯುಕ್ತ ಬುಧವಾರ ದಕ್ಷಿಣ ಕನ್ನಡ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.
ಬ್ಯಾಂಕ್ ಹಾಗೂ ಇತರ ಹಣಕಾಸು ಸಂಸ್ಥೆಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ. ಬ್ಯಾಂಕ್ಗಳಿಗೆ ನೆಗೋಷಿಯೇಬಲ್ ಇನ್ಸ್ ಟ್ರುಮೆಂಟ್ಸ್ ಆ್ಯಕ್ಟ್ ಅನ್ವಯವಾಗುವುದರಿಂದ ಜಿಲ್ಲಾಧಿಕಾರಿ ಆದೇಶದ ಹೊರತಾಗಿದೆ.
ಈಗಾಗಲೇ ನಿಗದಿಯಾಗಿರುವ ಪರೀಕ್ಷಾ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಉಳಿದಂತೆ ಎಲ್ಲಾ ಸರಕಾರಿ ಕಚೇರಿಗಳಿಗೆ ರಜೆ ಘೊಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.