ಸುಳ್ಯ: ಕೊಡಗು ಸಂಪಾಜೆ ಗ್ರಾಮದ ಶ್ರೀ ಪಂಚಲಿಂಗೇಶ್ವರ ದೇಗುಲದಲ್ಲಿ ಕಾಲಾವಧಿ ಜಾತ್ರೋತ್ಸವವು ಎ.11ರಂದು ಬೆಳಿಗ್ಗೆ ಉಗ್ರಾಣ ತುಂಬಿಸುವುದರ ಮೂಲಕ ಪ್ರಾರಂಭಗೊಂಡಿದ್ದು, ನಾಳೆ ರಾತ್ರಿ ಶ್ರೀ ಪಂಚಲಿಂಗೇಶ್ವರ ದೇವರ ನೃತ್ಯಬಲಿ, ಬಟ್ಟಲುಕಾಣಿಕೆ ಉತ್ಸವ ಜರುಗಲಿದೆ.
ಇಂದು ಬೆಳಿಗ್ಗೆ ದೇಗುಲದಲ್ಲಿ ಪರಿವಾರ ದೈವಗಳ ತಂಬಿಲ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಜರುಗಿತು.
ಈ ಸಂದರ್ಭದಲ್ಲಿ ದೇವಸ್ಥಾನದ ಪದಾಧಿಕಾರಿಗಳು ಸೇರಿದಂತೆ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
ಇಂದು ಸಂಜೆ ತಂತ್ರಿಗಳ ಆಗಮನ, ದೇವತಾ ಪ್ರಾರ್ಥನೆ, ಪಶುದಾನ, ಪುಣ್ಯಾಹ, ಪ್ರಸಾದ ಶುದ್ದಿ, ರಾಕ್ಷೆಘ್ನ ಹೋಮ, ವಾಸ್ತುಹೋಮ , ವಾಸ್ತುಬಲಿ, ರಾತ್ರಿ ದೇವರಿಗೆ ರಂಗಪೂಜೆ, ಅನ್ನಸಂತರ್ಪಣೆ ಜರುಗಲಿದ್ದು, ಬಳಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದೆ
ನಾಳೆ ಬೆಳಿಗ್ಗೆ ಗಣಪತಿ ಹೋಮ, ಬಿಂಬ ಶುದ್ದಿ, ಕಲಶಪೂಜೆ, ಕಲಶಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ, ರಾತ್ರಿ ದೀಪಾರಾಧನೆ, ಹವಿಸುಪೂಜೆ, ಶ್ರೀ ದೇವರ ನೃತ್ಯಬಲಿ, ಭೂತಬಲಿ, ಬಟ್ಟಲುಕಾಣಿಕೆ, ಅನ್ನಸಂತರ್ಪಣೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದೆ.