ಪುತ್ತೂರು : ಪುತ್ತೂರು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಶ್ರೀ ಮಡಿವಾಳ ಮಾಚಿದೇವ ಜಯಂತಿ ದಿನಾಚರಣೆ ಫೆ.1 ಬುಧವಾರ ಬೆಳಿಗ್ಗೆ 10.30 ಕ್ಕೆ ತಾಲೂಕು ಆಡಳಿತ ಸೌಧದ ತಾಲೂಕು ಕಛೆರಿ ಸಭಾಂಗಣದಲ್ಲಿ ನಡೆಯಲಿದೆ.
ಪುತ್ತೂರು ಸಹಾಯಕ ಆಯುಕ್ತ ಗಿರೀಶ್ ನಂದನ್ ಎಂ. ಸಂಸ್ಕರಣಾ ಜ್ಯೋತಿ ಪ್ರಜ್ವಲನೆ ಮಾಡಲಿದ್ದಾರೆ. ಪುತ್ತೂರು ಶಾಸಕ ಸಂಜೀವ ಮಠಂದೂರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್, ಪೂಡಾ ಅಧ್ಯಕ್ಷ ಭಾಮಿ ಅಶೋಕ್ ಶೆಣ್ವ, ಪೊಲೀಸ್ ಉಪಾಧೀಕ್ಷಕ ವೀರಯ್ಯ ಹಿರೇಮಠ್ ಭಾಗವಹಿಸಲಿದ್ದಾರೆ. ತಾಲೂಕು ಮಡಿವಾಳರ ಸಂಘದ ಅಧ್ಯಕ್ಷ ಪಿ.ಎನ್. ಸುಭಾಶ್ಚಂದ್ರ ಗೌರವ ಉಪಸ್ಥಿತರಿರುವರು ಎಂದು ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.