ಮಂಗಳೂರು: ಅಡ್ಯಾರ್ನಲ್ಲಿರುವ ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಹಲವು ಮಂದಿ ಅಸ್ವಸ್ಥರಾಗಿರುವ ಘಟನೆಯೊಂದು ನಡೆದಿತ್ತು. ಒಟ್ಟು 137 ಮಂದಿ ಅಸ್ವಸ್ಥರಾಗಿರುವ ಕುರಿತು ವರದಿಯಾಗಿದೆ. ಎಳನೀರು ಮತ್ತು ನ್ಯಾಚುರಲ್ ಐಸ್ಕ್ರೀಂ ಮಾರಾಟ ಸಂಸ್ಥೆಯಾದ ʼಬೊಂಡ ಫ್ಯಾಕ್ಟರಿʼ ಯನ್ನು ಬಂದ್ ಮಾಡುವಂತೆ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಡಾ.ತಿಮ್ಮಯ್ಯ ಆದೇಶ ನೀಡಿದ್ದಾರೆ.
ತಾತ್ಕಾಲಿಕವಾಗಿ ಮತ್ತು ಮುಂದಿನ ಆದೇಶದವರೆಗೆ ಬೊಂಡ ನೀರು ಮತ್ತು ಇತರೆ ಆಹಾರ ಪದಾರ್ಥಗಳನ್ನು ಮಾರಾಟ ಮಾಡದಂತೆ ನೋಟಿಸ್ ನೀಡಲಾಗಿದೆ.
ಹೊರರೋಗಿಗಳಾಗಿ 84 ಮಂದಿ ಒಳರೋಗಿಗಳಾಗಿ ಹಾಗೂ 53 ಮಂದಿಗೆ ಚಿಕಿತ್ಸೆ ಪಡೆದಿದ್ದಾರೆ. ಇದೀಗ ಬಂಟ್ವಾಳದ ಸರಕಾರಿ, ಖಾಸಗಿ ಆಸ್ಪತ್ರೆಯಲ್ಲಿ 30 ಮಂದಿಗೆ ಚಿಕಿತ್ಸೆ ಮುಂದುವರೆದಿದ್ದು, ಎಲ್ಲರ ಆರೋಗ್ಯ ಸ್ಥಿರವಾಗಿದೆ ಎಂದು ವರದಿಯಾಗಿದೆ.