ವ್ಯಕ್ತಿತ್ವ ವಿಕಸನಕ್ಕೆ ಮೌಲ್ಯಾಧಾರಿತ ಶಿಕ್ಷಣವೇ ಅಡಿಪಾಯ – ಸ್ವಾಮಿ ವಿವೇಕ ಚೈತನ್ಯಾನಂದ | “ವಿವೇಕ ಸ್ಮೃತಿ” ಉಪನ್ಯಾಸ ಕಾರ್ಯಕ್ರಮ

ಪುತ್ತೂರು: ಇಂದು ಭಾರತ ಬದಲಾವಣೆಯತ್ತ ಗಮನ ಹರಿಸುತ್ತಿದೆಯಾದರೂ ನಾವು ಆಧ್ಯಾತ್ಮಿಕವಾಗಿ ಬದಲಾಗುತ್ತಿದ್ದೇವೆಯೇ ಎಂಬುದನ್ನು ನಾವೇ ಪ್ರಶ್ನಿಸಿಕೊಳ್ಳಬೇಕಾದ ಪರಿಸ್ಥತಿ ಇದೆ. ಭಾರತೀಯರು ಸನಾತನ ಧರ್ಮಿಗಳು. ನಮಗೆ ಆದಿಯೂ ಇಲ್ಲ, ಅಂತ್ಯವೂ ಇಲ್ಲ. ಪ್ರತಿಯೊಂದು ಮಾನವನ ಜನ್ಮ ಭಗವಂತನ ಸಾಕ್ಷಾತ್ಕಾರವಾಗಿದೆ. ನಾವು ಯಾವುದೇ ಜಾತಿ-ಮತದ ಹಂಗಿಲ್ಲದೆ ಸತ್ಯ- ಧರ್ಮದಿಂದ ಬದುಕಿ ಇತರರಿಗೆ ಮಾದರಿಯಾಗಬೇಕು ಎಂದು ಪೊಳಲಿಯ ರಾಮಕೃಷ್ಣ ತಪೋವನದ ಅಧ್ಯಕ್ಷ ಸ್ವಾಮಿ ವಿವೇಕಚೈತನ್ಯಾನಂದ ಹೇಳಿದರು.

ಅವರು ವಿವೇಕಾನಂದ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಮಹಾವಿದ್ಯಾಲಯ, (ಸ್ವಾಯತ್ತ)ವಿವೇಕಾನಂದ ಸ್ನಾತಕೋತ್ತರ ಅಧ್ಯಯನ ಕೇಂದ್ರ, ವಿವೇಕಾನಂದ ಸಂಶೋಧನಾ ಕೇಂದ್ರ, ಭಾರತೀಯ ಸಂಸ್ಕೃತಿ ಮತ್ತು ಲಲಿತ ಕಲೆಗಳ ಅಧ್ಯಯನ ಕೇಂದ್ರ ಹಾಗೂ ಐಕ್ಯೂಎಸಿ ಘಟಕದ ಸಂಯುಕ್ತ ಆಶ್ರಯದಲ್ಲಿ ನಡೆದ ರಾಷ್ಟ್ರ ಸಂತ ಸ್ವಾಮಿ ವಿವೇಕಾನಂದರ ಕುರಿತಾದ ಚಿಂತನೆಗಳ ಮೂರನೇ ಉಪನ್ಯಾಸ ಮಾಲಿಕೆ  “ವಿವೇಕ ಸ್ಮೃತಿ” ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು.

ವಿವೇಕಾನಂದರ ತತ್ವ ಚಿಂತನೆಗಳನ್ನು ತಿಳಿಸಿಕೊಡುವುದಕ್ಕೆ ಗಂಟೆಗಳು, ದಿನಗಳು ಸಾಕಾಗುವುದಿಲ್ಲ. ವಿವೇಕಾನಂದರದ್ದು ಅಂತಹ ವ್ಯಕ್ತಿತ್ವ. ಶಿಕ್ಷಣ ಕೇವಲ ಉದ್ಯೋಗಕ್ಕಾಗಿಯಲ್ಲ ವ್ಯಕ್ತಿಯ ಪರಿಪೂರ್ಣತೆಗೆ ಅಡಿಪಾಯವಿದ್ದಂತೆ ಎಂದು ವಿವೇಕಾನಂದರು ಹೇಳಿದ್ದಾರೆ. ಜೊತೆಗೆ ವಿದ್ಯಾಭ್ಯಾಸವೆನ್ನುವುದು ನಮ್ಮೊಳಗಿನ ಶಕ್ತಿಯನ್ನು, ಪರಿಪೂರ್ಣತೆಯನ್ನು ಜಾಗೃತಗೊಳಿಸುತ್ತದೆ. ವಿದ್ಯಾರ್ಥಿಯಾದವನಿಗೆ ಆತ್ಮವಿಶ್ವಾಸ ಮತ್ತು ಶ್ರದ್ದೆಯಿದ್ದರೆ ಬದುಕಿನಲ್ಲಿ ಉನ್ನತ ಮಟ್ಟಕ್ಕೆ ಏರಲು ಸಾಧ್ಯ ಎಂದರು.



































 
 

ಇತಿಹಾಸ ವಿಭಾಗದ ಮುಖ್ಯಸ್ಥ ಡಾ. ಶ್ರೀಧರ್ ನಾಯ್ಕ್ ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ಸ್ನಾತ್ತಕೋತ್ತರ ಅಧ್ಯಯನ ಕೇಂದ್ರದ ನಿರ್ದೇಶಕ ಹಾಗೂ ಪರೀಕ್ಷಾಂಗ ಕುಲಸಚಿವ ಡಾ. ಎಚ್ ಜಿ ಶ್ರೀಧರ್, ಸ್ನಾತ್ತಕೋತ್ತರ ವಿಭಾಗದ ಡೀನ್ ಡಾ. ವಿಜಯ ಸರಸ್ವತಿ ಬಿ, ಭಾರತೀಯ ಸಂಸ್ಕೃತಿ ಮತ್ತು ಲಲಿತ ಕಲೆಗಳ ಅಧ್ಯಯನ ಕೇಂದ್ರದ ಸಂಯೋಜಕಿ, ವಿದ್ಯಾ ಎಸ್, ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಾದ ಹರಿಪ್ರಸಾದ್ ಸ್ವಾಗತಿಸಿ, ಪೂರ್ಣಿಮ ವಂದಿಸಿದರು. ಸ್ವಾತಿ ಎನ್ ನಿರೂಪಿಸಿದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top