ಪುತ್ತೂರು : ಚುನಾವಣಾ ಪ್ರಚಾರ ಸಭೆಗೆ ಭಾಗವಹಿಸಲು ಸಿಎಂ ಸಿದ್ಧರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ರವರು ಏ. 16 ರಂದು ಪುತ್ತೂರಿಗೆ ಆಗಮಿಸಲಿದ್ದು, ಕಿಲ್ಲೆ ಮೈದಾನದಲ್ಲಿ ಬೃಹತ್ ಚುನಾವಣಾ ಪ್ರಚಾರ ಸಭೆ ನಡೆಯಲಿದೆ ಎಂದು ಶಾಸಕರಾದ ಅಶೋಕ್ ರೈ ತಿಳಿಸಿದರು.
ಮಧ್ಯಾಹ್ನ 3 ಗಂಟೆಗೆ ಮೊಟ್ಟೆತ್ತಡ್ಕ ಹೆಲಿಪ್ಯಾಡ್ ನಲ್ಲಿ ಬಂದಿಳಿಯಲಿದ್ದು, ಆ ಬಳಿಕ ಕಿಲ್ಲೆ ಮೈದಾನದಲ್ಲಿ ಸಮಾವೇಶದಲ್ಲಿ ಭಾಗವಹಿಸಲಿದ್ದು, ಸಂಜೆ 5 ಗಂಟೆಗೆ ನಿರ್ಗಮಿಸಲಿದ್ದಾರೆ.
ಕಾರ್ಯಕ್ರಮದಲ್ಲಿ 15 ಸಾವಿರಕ್ಕೂ ಮಿಕ್ಕಿ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಜಿಲ್ಲಾ ಮಟ್ಟದ ಸಮಾವೇಶವನ್ನು ಪುತ್ತೂರಿನಲ್ಲಿ ಆಯೋಜನೆ ಮಾಡಲಾಗಿದೆ.ಕಾರ್ಯಕ್ರಮಕ್ಕೆ ಬೇಕಾದ ಎಲ್ಲಾ ಸಿದ್ದತೆಗಳನ್ನು ನಡೆಸಲಾಗುತ್ತಿದೆ ಎಂದು ಹೇಳಿದರು.
ಸಿಎಂ ರಿಂದ ರೋಡ್ ಶೋ
ಮೊಟ್ಟೆತ್ತಡ್ಕ ಹೆಲಿಪ್ಯಾಡ್‌ನಿಂದ ಕಿಲ್ಲೆ ಮೈದಾನದ ತನಕ ಸಿಎಂ ಮತ್ತು ಡೆಪ್ಯುಟಿ ಸಿಎಂ ಅವರಿಂದ ರೋಡ್ ಶೋ ನಡೆಸಾಗಿದ್ದು ಇದಕ್ಕಾಗಿ ಸಿದ್ಧತೆಗಳು ನಡೆಯುತ್ತಿದೆ ಎಂದು ಶಾಸಕರು ಹೇಳಿದರು.
ವೇದಿಕೆಯಲ್ಲಿ ಪುತ್ತೂರು ಬ್ಲಾಕ್ ಅಧ್ಯಕ್ಷರಾದ ಎಂಬಿ ವಿಶ್ವನಾಥ ರೈ, ವಿಟ್ಲ ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷರಾದ ಡಾ.ರಾಜಾರಾಂ ಕೆ ಬಿ, ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ ಶೆಟ್ಟಿ, ಕೆಪಿಸಿಸಿ ಪ್ರ.ಕಾರ್ಯದರ್ಶಿ ಎಂ ಎಸ್ ಮಹಮ್ಮದ್, ನಗರ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಅಲಿ,ಅಕ್ರಮ ಸಕ್ರಮ ಸಮಿತಿ ಸದಸ್ಯರಾದ ಮಹಮ್ಮದ್ ಬಡಗನ್ನೂರು, ಡಿಸಿಸಿ ಕಾರ್ಯದರ್ಶಿ ಮುರಳೀಧರ್ ರೈ ಮಠಂತಬೆಟ್ಟು, ಗ್ಯಾರಂಟಿ ಸಮಿತಿ ತಾಲೂಕು ಅಧ್ಯಕ್ಷರಾದ ಉಮಾನಾಥ ಶೆಟ್ಟಿ ಪೆರ್ನೆ, ಗ್ಯಾರಂಟಿ ಸಮಿತಿ ಜಿಲ್ಲಾ ಉಪಾಧ್ಯಕ್ಷ ಜೋಕಿಂ ಡಿಸೋಜಾ, ಪ್ರಮುಖರಾದ ಕುಂಬ್ರ ದುರ್ಗಾ ಪ್ರಸಾದ್ ರೈ, ಎ ಕೆ ಜಯರಾಂ ರೈ, ಉಸ್ತುವಾರಿ ನ್ಯಾಯವಾದಿ ನೂರುದ್ದೀನ್ ಸಾಲ್ಮರ, ಭೂ ನ್ಯಾಯ ಮಂಡಳಿ ಸದಸ್ಯ ಕೆ ಪಿ ಆಳ ಸೇರಿದಂತೆ ಪ್ರಮುಖರು ಉಪಸ್ಥಿತಿರಿದ್ದರು.