ಮಂಗಳೂರು : ದೇಶದಲ್ಲಿ 18ರಿಂದ 40 ವರ್ಷದ ಒಳಗಿನ ಯುವಜನರು 65 ಶೇಕಡಾದಷ್ಟಿದ್ದು ಅವರನ್ನು ಹೆಚ್ಚೆಚ್ಚು ಪ್ರಜಾಪ್ರಭುತ್ವದಲ್ಲಿ ತೊಡಗಿಸಿಕೊಂಡರೆ ಪ್ರಜಾತಂತ್ರ ಉತ್ತಮಗೊಳ್ಳುತ್ತದೆ ಎಂದು ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಹೇಳಿದರು.
ಸುಳ್ಯದ ಕೆವಿಜಿ ಕ್ಯಾಂಪಸ್ ನಲ್ಲಿ ಅವರು ಮಾತನಾಡಿದರು.
ದೇಶದ ಬೇರೆ ಬೇರೆ ಕಡೆ ಓಡಾಡಿದ್ದೇನೆ. ಎಲ್ಲ ಕಡೆಯ ಸಂಸ್ಕೃತಿ, ನಂಪನ್ಮೂಲ ನೋಡಿದ್ದೇನೆ. ಆದರೆ ನಮ್ಮಲ್ಲಿ ದೇಶದ ಎಲ್ಲ ಕಡೆ ಇರುವ ಸಂಸ್ಕೃತಿ ಮತ್ತು ನಂಪನ್ಮೂಲ ಇದೆ. ನಮ್ಮ ಜನರಲ್ಲಿ ಬುದ್ದಿವಂತಿಕೆ, ಸಾಮರ್ಥ್ಯ ಇದೆ. ಯುವಜನರ ಆಕಾಂಕ್ಷೆ ಏನಿದೆ ಎನ್ನುವ ಅರಿವು ಹೊಂದಿದ್ದೇನೆ. ಯುವಜನರ ಆಕಾಂಕ್ಷೆ ತಿಳಿದುಕೊಂಡು ದೇಶದ ಅಭಿವೃದ್ಧಿಯಲ್ಲಿ ಜೋಡಿಸಿಕೊಳ್ಳಲು ತಯಾರಿದ್ದೇನೆ ಎಂದ ಅವರು, ಮೂರನೇ ಬಾರಿಗೆ ನರೇಂದ್ರ ಮೋದಿಯವರು ಪ್ರಧಾನಿ ಆಗುತ್ತಿದ್ದಾರೆ. ದೇಶದ ಭವಿಷ್ಯದ ದೃಷ್ಟಿಯಿಂದ ಮೋದಿ ಮೂರನೇ ಟರ್ಮ್ ಅತಿ ಮುಖ್ಯವಾಗಿದೆ. ಅತಿ ಹೆಚ್ಚು ಮತದಾನದ ಮೂಲಕ ಮೋದಿಯವರನ್ನು ನಾವು ಗೆಲ್ಲಿಸಬೇಕಿದೆ ಎಂದರು.
ಕೆವಿಜಿ ಸಂಸ್ಥೆಯ ಪ್ರವರ್ತಕ ಕೆ.ವಿ. ಚಿದಾನಂದ್ ದಂಪತಿ ಕ್ರಾಪ್ಟನ್ ಬ್ರಿಜೇಶ್ ಚೌಟರನ್ನು ಶಾಲು ಹೊದಿಸಿ ಬರಮಾಡಿಕೊಂಡರು. ಸಭೆಯಲ್ಲಿ ಶಾಸಕಿ ಭಾಗೀರಥಿ ಮುರುಳ್ಯ, ಬಿಜೆಪಿ ಮಂಡಲ ನಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ವಿನಯ ಕುಮಾರ್ ಕಂದಡ್ಕ, ಪ್ರದೀಪ್ ರೈ ಮನವಳಿಕೆ, ವಿನಯ್ ಮುಳುಗಾಡು, ರವೀಂದ್ರ ಶೆಟ್ಟಿ ಉಳಿದೊಟ್ಟು, ಅಪ್ಪಯ್ಯ ಮಣಿಯಾಣಿ, ಹರೀಶ್ ಕಂಜಿಪಿಲಿ, ಎಸ್.ಎನ್.ಮನ್ಮಥ ಉಪಸ್ಥಿತರಿದ್ದರು.