ಪುತ್ತೂರು : ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಕೆಪಿಸಿಸಿ ಪ್ರಚಾರ ಸಮಿತಿಯ ರಾಜ್ಯದ ಸಹ ಅಧ್ಯಕ್ಷರಾಗಿ ಮಾಜಿ ಶಾಸಕಿ ಶಕುಂತಳಾ ಟಿ.ಶೆಟ್ಟಿ ಹಾಗೂ ಸಂಯೋಜಕರಾಗಿ ಪುತ್ತೂರು ಕೋಟಿ- ಚೆನ್ನಯ ಕಂಬಳ ಸಮಿತಿ ಅಧ್ಯಕ್ಷ ಎನ್.ಚಂದ್ರಹಾಸ ಶೆಟ್ಟಿ ನೇಮಕಗೊಂಡಿದ್ದಾರೆ.
ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯಕುಮಾರ್ ಸೊರಕೆ ಈ ಆದೇಶ ಹೊರಡಿಸಿದ್ದಾರೆ.
ಈ ಬಾರಿಯ ಲೋಕಸಭಾ ಚುನಾವಣೆ ಹಾಗೂ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಪಕ್ಷದ ಶಕ್ತಿಯನ್ನು ಹೆಚ್ಚಿಸಲು ನೂತನ ಪದಾಧಿಕಾರಿಗಳಿಗೆ ಜವಾಬ್ದಾರಿಯನ್ನು ನೀಡಲಾಗಿದೆ. ನೂತನ 10 ಜನ ಸಹ-ಅಧ್ಯಕ್ಷರುಗಳು, 9 ಮುಖ್ಯ ಸಂಯೋಜಕರು, 38 ಸಂಯೋಜಕರು ಹಾಗೂ ಸಂವಹನ ಮತ್ತು ಸಾಮಾಜಿಕ ಜಾಲತಾಣಕ್ಕೆ 2, ಮಾಧ್ಯಮ ಸಂಯೋಜಕರನ್ನಾಗಿ 2 ಹಾಗೂ 36 ಜಿಲ್ಲಾ ಪ್ರಚಾರ ಸಮಿತಿಗೆ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯಕುಮಾರ್ ಸೊರಕೆಯವರು ತಿಳಿಸಿದ್ದಾರೆ.