ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ 221 ಬೂತ್ಗಳಲ್ಲಿ ಮನೆ ಮನೆ ಭೇಟಿ ಕಾರ್ಯಕ್ರಮದ ಮಹಾ ಅಭಿಯಾನ ಏ.21 ಭಾನುವಾರ ನಡೆಯಲಿದ್ದು, ಇದಕ್ಕಾಗಿ ಎಲ್ಲಾ ಪೂರ್ವ ತಯಾರಿ ನಡೆಸಲಾಗಿದೆ ಎಂದು ಪುತ್ತೂರು ವಿಧಾನಸಭಾ ಕ್ಷೇತ್ರದ ಚುನಾವಣಾ ಸಮಿತಿ ಸಂಚಾಲಕ ಚನಿಲ ತಿಮ್ಮಪ್ಪ ಶೆಟ್ಟಿ ತಿಳಿಸಿದ್ದಾರೆ.
ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಬೆಳಿಗ್ಗೆಯಿಂದ ಸಂಜೆ ತನಕ ಮನೆ ಮನೆ ಭೇಟಿ ನಡೆಯಲಿದ್ದು, ಕೇಂದ್ರ ಸರಕಾರದ ಯೋಜನೆ ಹಾಗೂ ಪ್ರಣಾಳಿಕೆ ಕುರಿತು ಮನವರಿಕೆ ಮಾಡಲಾಗುವುದು ಎಂದು ತಿಳಿಸಿದರು.
ಈಗಾಗಲೇ ಪ್ರತಾಪಸಿಂಹ ನಾಯಕ್ ಅವರ ನೇತೃತ್ವದಲ್ಲಿ 13 ಕಡೆಗಳಲ್ಲಿ ಚುನಾವಣಾ ಪ್ರಚಾರ ಸಭೆ ನಡೆದಿದೆ. ಏ.23 ರಂರು ಸುಳ್ಯದಲ್ಲಿ ಬೆಳಿಗ್ಗೆ 8.30 ಅಣ್ಣಾಮಲೈ ಅವರಿಂದ ಬೃಹತ್ ರೋಡ್ ಶೋ ನಡೆಸಿ ಬಳಿಕ ಪುತ್ತೂರಿನಲ್ಲಿ ಬೆಳಿಗ್ಗೆ 10.30 ಕ್ಕೆ ರೋಡ್ ಶೋ 221 ನಡೆಯಲಿದೆ. ಈ ಕಾರ್ಯಕ್ರಮದಲ್ಲಿ 221 ಬೂತ್ ಗಳಿಂದ ಕಾರ್ಯಕರ್ತರು, ಹಿತೈಷಿಗಳು ಪಾಲ್ಗೊಳ್ಳಲಿದ್ದಾರೆ. ಬಳಿಕ ಫರಂಗಿಪೇಟೆಗೆ ತೆರಳಿದ್ದಾರೆ. ಮಧ್ಯಾಹ್ನ 3.30 ಕ್ಕೆ ಉಪ್ಪಿನಂಗಡಿಯಲ್ಲಿ ಬೆಳ್ತಂಗಡಿ ಹರೀಶ್ ಪೂಂಜಾ ಅವರ ನೇತೃತ್ವದಲ್ಲಿ ರೋಡ್ ಶೋ ನಡೆಯಲಿದೆ. ಸಂಜೆ 5.30 ಕ್ಕೆ ವಿಟ್ಲದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಉಪಸ್ಥಿತಿಯಲ್ಲಿ ರೋಡ್ ಶೋ ನಡೆಯಲಿದೆ.
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರ ಮಂಡಲ ಅಧ್ಯಕ್ಷ ಪಿ. ಜಿ. ಜಗನ್ನಿವಾಸ್ ರಾವ್, ಸಹಪ್ರಭಾರಿ ಗೋಪಾಲಕೃಷ್ಣ ಹೇರಳೆ, ನಿತೀಶ್ ಕುಮಾರ್ ಶಾಂತಿವನ ಉಪಸ್ಥಿತರಿದ್ದರು.