ಫೆ.13-17 : ಏರೋ ಇಂಡಿಯಾ ವೈಮಾನಿಕ ಪ್ರದರ್ಶನ

10 ದಿನ ಯಲಹಂಕ ವ್ಯಾಪ್ತಿಯಲ್ಲಿ ಮಾಂಸಾಹಾರ ನಿಷಿದ್ಧ

ಬೆಂಗಳೂರು: ಯಲಹಂಕದ ವಾಯುನೆಲೆಯಲ್ಲಿ ಫೆ.13ರಿಂದ 17ರವರೆಗೆ ಐದು ದಿನ ಏಷ್ಯಾದ ಅತಿದೊಡ್ಡ ಏರೋ ಇಂಡಿಯಾ ವೈಮಾನಿಕ ಪ್ರದರ್ಶನ ನಡೆಯಲಿದೆ.
ಈ ಪ್ರದರ್ಶನದ ಹಿನ್ನೆಲೆಯಲ್ಲಿ ಯಲಹಂಕ ವಾಯುನೆಲೆಯ 10 ಕಿ. ಮೀ. ವ್ಯಾಪ್ತಿಯಲ್ಲಿ ಜ.30 ರಿಂದ ಫೆ.20ರ ವರೆಗೆ ಎಲ್ಲ ಮಾಂಸದ ಅಂಗಡಿಗಳು, ಚಿಕನ್, ಮೀನು ಮಾರಾಟ ಕೇಂದ್ರಗಳನ್ನು ಬಂದ್ ಮಾಡುವಂತೆ ಬಿಬಿಎಂಪಿ ಆದೇಶ ಹೊರಡಿಸಿದೆ.
ಈ ಅವಧಿಯಲ್ಲಿ ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳಲ್ಲಿ ಮಾಂಸ ಆಹಾರ ಮಾರಾಟ ಮತ್ತು ಸೇವೆಯನ್ನು ನಿರ್ಬಂಧಿಸಲಾಗಿದೆ.
ಈ ಆದೇಶವನ್ನು ಉಲ್ಲಂಘಿಸಿದರೆ ಬಿಬಿಎಂಪಿ ಕಾಯ್ದೆ 2020 ಮತ್ತು ಭಾರತೀಯ ವಿಮಾನ ನಿಯಮ 1937 ನಿಯಮ 91ರಡಿ ಕ್ರಮ ಕೈಗೊಳ್ಳಲಾಗುವುದು ಎಂದು ಬಿಬಿಎಂಪಿ ಯಲಹಂಕ ವಲಯದ ಜಂಟಿ ಆಯುಕ್ತರು ಎಚ್ಚರಿಸಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top