ಹುಬ್ಬಳ್ಳಿ: ಹುಬ್ಬಳ್ಳಿ ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ ರಾಷ್ಟ್ರಾದ್ಯಂತ ಭಾರೀ ಸಂಚಲನ ಸೃಷ್ಟಿಸಿದ್ದು, ಇದೀಗ ಮರಣೋತ್ತರ ವರದಿ ಬಿಡುಗಡೆಗೊಂಡಿದೆ. ಈ ಮೂಲಕ ಭಯಾನಕ ಸಂಗತಿ ಬಯಲಾಗಿದ್ದು, ನೇಹಾಳನ್ನು 14 ಬಾರಿ ಇರಿದು ಹತ್ಯೆಗೈಯಲಾಗಿದೆ ಎಂದು ವರದಿಯಿಂದ ತಿಳಿದು ಬಂದಿದೆ.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್ ಸದಸ್ಯ ನಿರಂಜನ್ ಹಿರೇಮಠ ಅವರ ಪುತ್ರಿ, ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾಳನ್ನು ಆರೋಪಿ ಫಯಾಜ್ ಏ.18 ರಂದು ಸಂಜೆ ಕಾಲೇಜಿನಿಂದ ಹೊರ ಬರುತ್ತಿದ್ದ ವೇಳೆ ಚಾಕುವಿನಿಂದ ಇರಿದು ಹತ್ಯೆಗೈದಿದ್ದ. ಈ ಸಂದರ್ಭದಲ್ಲಿ ಪ್ರಾಥಮಿಕ ವರದಿಯಿಂದ 9 ಬಾರಿ ಇರಿಯಲಾಗಿತ್ತು ಎಂದು ವರದಿಯಾಗಿತ್ತು. ಆರೋಪಿ ಫಯಾಜ್, ನೇಹಾಳಿಗೆ 14 ಬಾರಿ ಚಾಕುವಿನಿಂದ ಇರಿದಿದ್ದಾನೆ. 9 ಬಾರಿ ಇರಿದಿದ್ದಾನೆ ಎಂದು ಆರಂಭದಲ್ಲಿ ಹೇಳಲಾಗಿತ್ತು. ಆದರೆ, ಶವಪರೀಕ್ಷೆಯಲ್ಲಿ ಅಸಲಿ ಸಂಗತಿ ಬಯಲಾಗಿದೆ. ಇದಲ್ಲದೇ ನೇಹಾಳ ಕತ್ತಿನ ಭಾಗದಲ್ಲಿರುವ ರಕ್ತನಾಳ ತುಂಡಾಗಿದೆ ಎನ್ನಲಾಗಿದೆ. ಅತಿಯಾದ ರಕ್ತಸ್ರಾವದಿಂದಲೇ ಆಕೆ ಮೃತಪಟ್ಟಿರುವುದಾಗಿ ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರು ತಿಳಿಸಿದ್ದಾರೆ. ಎಂದು ತಿಳಿದುಬಂದಿದೆ.
ಆರೋಪಿ ಫಯಾಜ್ ನೇಹಾಳ ಹೃದಯಕ್ಕೂ ಚಾಕುವಿನಿಂದ ಚುಚ್ಚಿದ್ದಾನೆ ಎಂದು ಹೇಳಲಾಗಿದೆ. ಈ ಬಗ್ಗೆ ಇನ್ನೂ ಅಧಿಕೃತ ಹೇಳಿಕೆ ಹೊರ ಬರಬೇಕಾಗಿದೆ.