ಪುತ್ತೂರು: ಮೊದಲ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನವಾಗಿದ್ದು, ಬಹುತೇಕ ಕಡೆಗಳಲ್ಲಿ ಶಾಂತಿಯುತ ಮತದಾನವಾಗಿದೆ.
ರಾಜ್ಯದಲ್ಲಿ ಶೇ.64.57 ಮತ ಚಲಾವಣೆಯಾಗಿದೆ. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಅತಿ ಹೆಚ್ಚು ಶೇ.74.87ರಷ್ಟು ಮತದಾನ ಆಗಿದ್ದರೆ, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಅತಿ ಕಡಿಮೆ ಶೇ.49.37ರಷ್ಟು ಮತದಾನವಾಗಿದೆ.
ಸಂಜೆ 6 ಗಂಟೆ ವೇಳೆಗೆ ಮತದಾನ ಪ್ರಕ್ರಿಯೆ ಮುಗಿದಿತ್ತು. ಮಂಡ್ಯ-ಶೇ.74.87, ಕೋಲಾರ-ಶೇ.73.25, ಉಡುಪಿ ಚಿಕ್ಕಮಗಳೂರು- ಶೇ.72.69, ದಕ್ಷಿಣ ಕನ್ನಡ-ಶೇ.72.30, ಹಾಸನ-ಶೇ.72.13, ತುಮಕೂರು-ಶೇ.72.10, ಚಿಕ್ಕಬಳ್ಳಾಪುರ-ಶೇ.71.85, ಚಾಮರಾಜನಗರ- ಶೇ.69.86, ಚಿತ್ರದುರ್ಗ-ಶೇ.67.52, ಮೈಸೂರು-ಶೇ.67.55, ಬೆಂಗಳೂರು ಗ್ರಾಮಾಂತರ-ಶೇ.61.78, ಬೆಂಗಳೂರು ಉತ್ತರ-ಶೇ.51.51, ಬೆಂಗಳೂರು ಕೇಂದ್ರ-ಶೇ.49.77 ಹಾಗೂ ಬೆಂಗಳೂರು ದಕ್ಷಿಣ-ಶೇ.49.37ರಷ್ಟು ಮತದಾನವಾಗಿದೆ.