ಕೇಂದ್ರದಿಂದ ರಾಜ್ಯ ಸರಕಾರಕ್ಕೆ 3,454 ಕೋಟಿ ಬರ ಪರಿಹಾರ ಘೋಷಣೆ

ಬೆಂಗಳೂರು: ಕೇಂದ್ರ ಸರಕಾರ ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ ಘೋಷಣೆ ಮಾಡಿದೆ.

ನೆರೆ ಪರಿಹಾರವೆಂದು ತಮಿಳುನಾಡಿಗೆ 275 ಕೋಟಿ ರೂ. ಪರಿಹಾರ ನೀಡಿದೆ. ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ರಾಜ್ಯ ಸರಕಾರ ಕೇಂದ್ರಕ್ಕೆ ಬರ ಪರಿಹಾರಕ್ಕಾಗಿ 18,174 ಕೋಟಿ ಹಣ ಬೇಡಿಕೆ ಇಟ್ಟಿತ್ತು. ಬೇಡಿಕೆ ಇಟ್ಟು ಇಷ್ಟು ದಿನಗಳು ಕಳೆದರೂ ಕೇಂದ್ರ ಸರಕಾರ ಬರ ಪರಿಹಾರ ಬಿಡುಗಡೆ ಮಾಡಿರಲಿಲ್ಲ. ಹೀಗಾಗಿ ರಾಜ್ಯ ಸರಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು. ಬಳಿಕ ಕೇಂದ್ರ ಸರಕಾರ ಬರ ಪರಿಹಾರ ಬಿಡುಗಡೆ ಮಾಡುವುದಾಗಿ ಸುಪ್ರೀಂ ಕೋರ್ಟ್‌ನಲ್ಲಿ ಸೋಮವಾರದೊಳಗೆ ಒಪ್ಪಿಕೊಂಡಿತ್ತು. ಅದರಂತೆ ಇದೀಗ ಕೇಂದ್ರ ಸರಕಾರ ಬರ ಪರಿಹಾರ ಘೋಷಣೆ ಮಾಡಿದೆ.

ಹೀಗಾಗಿ ರಾಜ್ಯ ಸರಕಾರ ಸುಪ್ರೀಂಕೋರ್ಟ್ ಮೊರೆ ಹೋಗಿತ್ತು. ವಿಚಾರಣೆ ನಡೆಸಿದ ಸುಪ್ರೀಂ ರಾಷ್ಟ್ರೀಯ ಪ್ರಾಕೃತಿಕ ವಿಕೋಪ ನಿಧಿಯಿಂದ ಕರ್ನಾಟಕಕ್ಕೆ ತಕ್ಷಣ ಹಣ ಬಿಡುಗಡೆ ಮಾಡುವಂತೆ ಸುಪ್ರೀಂಕೋರ್ಟ್ ಆದೇಶಿಸಿತ್ತು. ಅದರಂತೆ ಕಳೆದ ವಾರ ಕೇಂದ್ರ ಸರಕಾರ ಬರ ಪರಿಹಾರ ಬಿಡುಗಡೆ ಮಾಡುವುದಾಗಿ ಸುಪ್ರೀಂಕೋರ್ಟ್‌ನಲ್ಲಿ ಒಪ್ಪಿಕೊಂಡಿತ್ತು. ಅದರಂತೆ ಸದ್ಯ ಕೇಂದ್ರ ಸರಕಾರ ಬರ ಪರಿಹಾರ ಘೋಷಣೆ ಮಾಡಿದೆ.



































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top