ಪುತ್ತೂರು: ಬನ್ನೂರಿನ ಮೇಲ್ಮಜಿಲು ನಿವಾಸಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ನಡೆದಿದೆ.
ಸೀತಾರಾಮ ಶೆಟ್ಟಿ (45) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಡವರು. ಖಾಸಗಿ ಗ್ಯಾಸ್ ಕಂಪೆನಿಯಲ್ಲಿ ಕಳೆದ ಹಲವಾರು ವರ್ಷಗಳಿಂದ ದುಡಿಯುತ್ತಿದ್ದ ಇವರು, ಮನೆಮನೆಗೆ ಗ್ಯಾಸ್ ಪೂರೈಕೆ ಮಾಡುತ್ತಿದ್ದರು.
ಮನೆಯ ಒಳಗಡೆ ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಮಂಗಳೂರು ಕೆ.ಎಸ್. ಹೆಗ್ಡೆ ಆಸ್ಪತ್ರೆಯಲ್ಲಿ ಪೋಸ್ಟ್ ಮಾರ್ಟಂ ಮಾಡಲಾಗಿದ್ದು, ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮೃತರು ಪತ್ನಿ ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ