ದೆಹಲಿ : 2024 ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿ 15 ಆಟಗಾರರ ಭಾರತ ತಂಡವನ್ನು ಇಂದು ಬಿಸಿಸಿಐ ಪ್ರಕಟಿಸಿದೆ. ನಿರೀಕ್ಷೆಯಂತೆ ಭಾರತ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದು ಉಪ ನಾಯಕನ ಜವಾಬ್ದಾರಿಯನ್ನು ಆಲ್ ರೌಂಡರ್ ಹಾರ್ದಿಕ್ ಪಾಂಡ್ಯಗೆ ನೀಡಲಾಗಿದೆ.
ಪ್ರಸ್ತುತ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯಲ್ಲಿ ಅತ್ಯುತ್ತಮ ಫಾರ್ಮ್‌ನಲ್ಲಿರುವ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಟ್ಸನ್ ಹಾಗೂ ಯಜೇಂದ್ರ ಚಹಲ್ ಅವರು ಭಾರತ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಆ ಮೂಲಕ ಕೆಎಲ್ ರಾಹುಲ್ ಅವರು ತಂಡದಲ್ಲಿ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ.
ಆರಂಭಿಕ ಆಟಗಾರನ ಸ್ಥಾನದಲ್ಲಿ ಯಶಸ್ವಿ ಜೈಸ್ವಾಲ್ ಅವರಿದ್ದರೆ, ಅನುಭವಿ ವಿರಾಟ್ ಕೊಹ್ಲಿ ಸೂರ್ಯಕುಮಾರ್ ಯಾದವ್ ಬ್ಯಾಟಿಂಗ್ ಬಲ ತುಂಬಿದ್ದಾರೆ. ಆಲ್ ರೌಂಡರ್ ಗಳ ಕೋಟಾದದಲ್ಲಿ ಹಾರ್ದಿಕ್ ಜತೆಗೆ, ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್ ಇದ್ದಾರೆ. ಪ್ರಮುಖ ಸ್ಪಿನ್ನರ್ ಗಳಾಗಿ ಕುಲದೀಪ್ ಯಾದವ್ ಮತ್ತು ಯಜೇಂದ್ರ ಚಹಲ್ ಆಯ್ಕೆಯಾಗಿದ್ದಾರೆ. ವೇಗಿಗಳ ವಿಭಾಗದಲ್ಲಿ ಜಸ್ಟೀತ್ ಬುಮ್ರಾ, ಮೊಹಮ್ಮದ್ ಸಿರಾಜ್ ಮತ್ತು ಅರ್ಶದೀಪ್ ಸಿಂಗ್ ಸ್ಥಾನ ಪಡೆದಿದ್ದಾರೆ. ಮೀಸಲು ಆಟಗಾರರಾಗಿ ಶುಭಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹಮದ್ ಮತ್ತು ಆವೇಶ್ ಖಾನ್ ಸ್ಥಾನ ಪಡೆದಿದ್ದಾರೆ.
ಭಾರತ ತಂಡ:
ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ಕೀಪರ್), ಸಂಜು ಸ್ಯಾಟ್ಸನ್ (ಕೀಪರ್), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯುಜೇಂದ್ರ ಚಾಹಲ್, ಅರ್ಶ್ಲೀಪ್ ಸಿಂಗ್, ಜಸ್ಟೀತ್ ಬುಮ್ರಾ, ಮೊಹಮ್ಮದ್. ಸಿರಾಜ್. ಸಿಂಗ್, ಖಲೀಲ್ ಅಹಮದ್ ಮತ್ತು ಅವೇಶ್ ಖಾನ್.