ಪುತ್ತೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕುರಿತು ತನಿಖೆಗೆ ರಚಿಸಲಾಗಿರುವ 18 ಮಂದಿ ಪೊಲೀಸ್ ಅಧಿಕಾರಿಗಳನ್ನು ಒಳಗೊಂಡಿರುವ ವಿಶೇಷ ತನಿಖಾ ತಂಡದಲ್ಲಿ ಪುತ್ತೂರಿನ ಧನ್ಯಾ ನಾಯಕ್ ಅವರನ್ನು ನೇಮಕ ಮಾಡಲಾಗಿದೆ.
ಧನ್ಯಾ ನಾಯಕ್ ಅವರು ಈ ಹಿಂದೆ ಪುತ್ತೂರಿನಲ್ಲಿ ಪ್ರೊಬೆಷನರಿ ಡಿವೈಎಸ್ಪಿಯಾಗಿದ್ದು, ಉಪ್ಪಿನಂಗಡಿ ಪೊಲೀಸ್ ಠಾಣೆ, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಾರ್ಯ ನಿರ್ವಹಿಸಿದ್ದರು. ಪ್ರಸ್ತುತ ಮಂಗಳೂರು ನಗರ ದಕ್ಷಿಣ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಐಪಿಎಸ್ ಅಧಿಕಾರಿ ಬಿ.ಕೆ. ಸಿಂಗ್ ನೇತೃತ್ವದ ವಿಶೇಷ ತನಿಖಾ ತಂಡದಲ್ಲಿ ಒಟ್ಟು 18 ಅಧಿಕಾರಿಗಳು ಕಾರ್ಯನಿರ್ವಹಿಸಲಿದ್ದಾರೆ. ಇಬ್ಬರು ಮಹಿಳೆಯರು ಸೇರಿ ಮೂವರು ಎಸಿಪಿ ಮಟ್ಟದ ಅಧಿಕಾರಿಗಳು, ಮೂರು ಮಂದಿ ಮಹಿಳಾ ಅಧಿಕಾರಿ ಸೇರಿ ಐದು ಮಂದಿ ಇನ್ಸ್ಪೆಕ್ಟರ್ ಗಳನ್ನು ತಂಡದಲ್ಲಿ ನೇಮಕ ಮಾಡಲಾಗಿದೆ.