ಬೆಂಗಳೂರು: ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಹಾಗೂ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ, ಮಾಜಿ ಸಚಿವ ಹೆಚ್ಡಿ ರೇವಣ್ಣ ಅವರನ್ನು ವಿಶೇಷ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕೃತಗೊಂಡ ಬೆನ್ನಲ್ಲೇ ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಿ ದೇವೇಗೌಡರ ನಿವಾಸದಿಂದ ವಿಶೇಷ ತನಿಖಾ ತಂಡದ ಅಧಿಕಾರಿಗಳು ಬಂಧಿಸಿದ್ದಾರೆ.
ರೇವಣ್ಣರನ್ನು ವಶಕ್ಕೆ ಪಡೆದ ಅಧಿಕಾರಿಗಳು ನೇರವಾಗಿ ಎಸ್ಐಟಿ ಕಚೇರಿಗೆ ಕರೆದುಕೊಂಡು ಹೋಗಿದ್ದಾರೆ. ಎನ್ನಲಾಗಿದೆ.
ಮೈಸೂರಿನ ಕೆಆರ್ ನಗರ ಠಾಣೆಯಲ್ಲಿ ದಾಖಲಾದ ಅಪಹರಣ, ದೌರ್ಜನ್ಯ ಪ್ರಕರಣದಲ್ಲಿ ರೇವಣ್ಣರನ್ನು ಎಸ್ಐಟಿ ವಶಕ್ಕೆ ಪಡೆದಿದೆ. ಇವತ್ತು ರಾತ್ರಿ ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ.