ಪುತ್ತೂರು: ಇತಿಹಾಸ ಪ್ರಸಿದ್ಧ ಹೊನಲು ಬೆಳಕಿನ 30ನೇ ವರ್ಷದ ಪುತ್ತೂರು ಕೋಟಿ-ಚೆನ್ನಯ ಜೋಡುಕರೆ ಕಂಬಳದ ಅಂಗವಾಗಿ ಸಂಜೆ ನಡೆದ ಸಭಾ ಕಾರ್ಯಕ್ರಮದಲ್ಲಿ ಕಂಬಳದ 30ನೇ ವರ್ಷದ ನೆನಪಿಗಾಗಿ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಾಯಿತು.
ರಾಜ್ಯ ಸಹಕಾರ ಮಂಡಲದ ಅಧ್ಯಕ್ಷ, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಸ್ಮರಣ ಸಂಚಿಕೆ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಕಂಬಳ ಕೂಟಕ್ಕೆ ಮೂರನೇ ತೀರ್ಪುಗಾರರಾಗಿ ಸೆನ್ಸಾರ್ ವ್ಯವಸ್ಥೆಯನ್ನು ಕೊಡುಗೆಯಾಗಿ ನೀಡಿದ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರನ್ನು ಕಂಬಳ ಸಮಿತಿ ವತಿಯಿಂದ ಸನ್ಮಾನಿಸಲಾಯಿತು.
ಕಂಬಳ ಸಮಿತಿ ಗೌರವಾಧ್ಯಕ್ಷ, ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಮಾತನಾಡಿ, ಜನಪದ ವೀರ ಕ್ರೀಡೆಯಾಗಿರುವ ಕಂಬಳ ದಿ.ಜಯಂತ್ ರೈ ಅವರಿಂದ ತೊಡಗಿ ದಿ.ಮುತ್ತಪ್ಪ ರೈ ಅವರ ಕಾಲದಲ್ಲೂ ಯಶಸ್ವಿಯಾಗಿ ನಡೆದಿದೆ. ಕಾಂತಾರ ಚಿತ್ರದ ಮೂಲಕ ನಮ್ಮ ಕಲೆ, ಸಂಸ್ಕೃತಿ, ಕಂಬಳ ಕ್ರೀಡೆ ಜಗತ್ತಿಗೆ ಆಕರ್ಷಣೆಯಾಗುವ ಕೆಲಸ ಮಾಡಿದೆ ಎಂದರು.
ಐಕಳಬಾವ ಕಂಬಳ ಸಮಿತಿ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಬೆಳಪು ಮಾತನಾಡಿ, ಪ್ರಸ್ತುತ ಕಂಬಳ ಯಾವುದೇ ಅಡೆತಡೆಯಿಲ್ಲದೆ ಮುಂದುವರಿದಿದೆ ಎಂದರೆ ಇದರ ಹಿಂದೆ ಅನೇಕ ಜನರ ಶ್ರಮದ ಪಾಲು ಇದೆ ಎಂದರು.
ಮಾಜಿ ಸಚಿವ ರಮಾನಾಥ ರೈ ಮಾತನಾಡಿ, ಪೇಟೆಯ ಮಧ್ಯಭಾಗದಲ್ಲಿ ನಡೆಯುವ ಕಂಬಳ ಅಂದೆ ಅದು ಪುತ್ತೂರು ಕೋಟಿ-ಚೆನ್ನಯ ಕಂಬಳ. ಹಾಗಾಗಿ ಇದು ಆಕರ್ಷಣೆಯ ಕಂಬಳ ಎಂದರು.
ಮಾಜಿ ಸಚಿವ, ಶಾಸಕ ಯು.ಟಿ. ಖಾದರ್ ಮಾತನಾಡಿ, ಜಿಲ್ಲೆಯ ಸಂಸ್ಕೃತಿ, ಆಚಾರ ವಿಚಾರ ಬಿಂಬಿಸುವ ಚಿತ್ರಗಳಿಂದ ಜಿಲ್ಲೆಗೆ ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚಳವಾಗಿದೆ. ಪರಿಣಾಮ ಕಂಬಳದಂತಹ ಜನಪದ ಕ್ರೀಡೆಗೆ ಹೆಚ್ಚಿನ ಮಹತ್ವ ಬಂದಿದೆ ಎಂದರು.
ಕಂಬಳ ಸಮಿತಿ ಮಾರ್ಗದರ್ಶಕಿ, ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ, ಕಂಬಳ ಅಕಾಡೆಮಿ ಪ್ರಧಾನ ಕಾರ್ಯದರ್ಶಿ ಗುಣಪಾಲ ಕಡಂಬ, ಉದ್ಯಮಿ ಅಶೋಕ್ ಕುಮಾರ್ ರೈ, ಹಿರಿಯ ದೈವಾರಾಧಕ ತಮ್ಮಣ್ಣ ಶೆಟ್ಟಿ ಶುಭ ಹಾರೈಸಿದರು.
ವಿಶೇಷ ಆಕರ್ಷಣೆಯಾಗಿ ಚಲನಚಿತ್ರ ನಟ, ನಟಿಯರಾದ ಅನೂಪ್ ಭಂಡಾರಿ, ಸಂಗೀತ ಶೃಂಗೇರಿ, ಸಾನಿಯ ಅಯ್ಯರ್, ದೀಪಕ್ ರೈ ಪಾಣಾಜೆ, ಪ್ರಕಾಶ್ ತುಮಿನಾಡು, ಉಗ್ರಂ ಮಂಜು, ವಜ್ರಧೀರ್ ಜೈನ್, ಚಂದ್ರಹಾಸ ಶೆಟ್ಟಿ, ತಮ್ಮ ಮಾತಿನ ಝಲಕ್‌ನಿಂದ ಪ್ರೇಕ್ಷಕರ ಗಮನ ಸೆಳೆದರು.
ಮುಖ್ಯ ಅತಿಥಿಗಳಾಗಿ ಇಂಟಕ್ ಕಾರ್ಯದರ್ಶಿ ರಾಕೇಶ್ ಮಲ್ಲಿ, ವಿಧಾನಪರಿಷತ್ ಮಾಜಿ ಸದಸ್ಯ ಐವನ್ ಡಿ’ಸೋಜಾ, ನೇಸರಕಂಪ ಡಾ.ರವಿಶೆಟ್ಟಿ ಮೂಡಂಬೈಲು, ತಾಲೂಕು ಬಂಟರ ಸಂಘದ ಅಧ್ಯಕ್ಷ ಶಶಿಕುಮಾರ್ ಬಾಲ್ಯೊಟ್ಟು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ.ವಿಶ್ವನಾಥ ರೈ, ಉಪ್ಪಿನಂಗಡಿ-ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಾಜರಾಮ್ ಕೆ.ಬಿ., ನಗರ ಕಾಂಗ್ರೆಸ್ ಅಧ್ಯಕ್ಷ ಎಚ್.ಮಹಮ್ಮದಾಲಿ, ಉದ್ಯಮಿ ಉಮೇಶ್ ನಾಡಾಜೆ, ಉದ್ಯಮಿ ಸೀತಾರಾಮ ರೈ ಕೆದಂಬಾಡಿಗುತ್ತು, ಎಪಿಎಂಸಿ ಮಾಜಿ ನಿರ್ದೇಶಕ ಶಕೂರ್ ಹಾಜಿ, , ಡಾ.ರಘು ಬೆಳ್ಳಿಪ್ಪಾಡಿ, ರಾಜ್ಯ ಸಮಾಜ ಕಲ್ಯಾಣ ಮಂಡಳಿ ಮಾಜಿ ಅಧ್ಯಕ್ಷೆ ದಿವ್ಯಪ್ರಭಾ ಚಿಲ್ತಡ್ಕ ಮುಂತಾದವರು ಪಾಲ್ಗೊಂಡು ಮಾತನಾಡಿದರು.
ಕಂಬಳ ಸಮಿತಿ ಉಪಾಧ್ಯಕ್ಷರಾದ ಉದ್ಯಮಿ ಶಿವರಾಮ ಆಳ್ವ, ಜಿನ್ನಪ್ಪ ಪೂಜಾರಿ, ಸದಸ್ಯರಾದ ಯೋಗೀಶ್ ಎಸ್.ಸಾಮಾನಿ, ಕೃಷ್ಣಪ್ರಸಾದ್ ಆಳ್ವ, ಪ್ರಧಾನ ಕಾರ್ಯದರ್ಶಿ ದಿನೇಶ್ ಕುಮಾರ್ ಪಿ.ವಿ. ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಂಬಳ ಸಮಿತಿ ಅಧ್ಯಕ್ಷ ಎನ್.ಚಂದ್ರಹಾರ ಶೆಟ್ಟಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಕಂಬಳ ಸಮಿತಿ ತೀರ್ಪುಗಾರ ನಿರಂಜನ ರೈ ಮಠಂತಬೆಟ್ಟು ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.
ಸನ್ಮಾನ:
ಈ ಸಂದರ್ಭದಲ್ಲಿ ಪುತ್ತೂರು ಗಣೇಶೋತ್ಸವ ಸಮಿತಿ ಅಧ್ಯಕ್ಷ ಎನ್.ಸುಧಾಕರ ಶೆಟ್ಟಿ, ಕಂಬಳದ ಕ್ಷೇತ್ರದ ಅಪ್ಪು ಯಾನೆ ವಲೇರಿಯನ್ ಡೇಸಾ ಅಲ್ಲಿಪಾದೆ, ಕ್ರೀಡಾ ಕ್ಷೇತ್ರದ ಆಕಾಶ್ ಐತಾಳ್, ಹಿರಿಯ ಕಂಬಳ ಓಟಗಾರ ಸತೀಶ್ ದೇವಾಡಿಗ ಅಳದಂಗಡಿ, ಕ್ರೀಡಾರತ್ನ ಪುರಸ್ಕೃತ ಶ್ರೀಧರ್ ಮಾರೋಡಿ, ಬ್ಯಾಂಕ್ ಆಪ್ ಬರೋಡಾದ ಜನರಲ್ ಮೆನೇಜರ್ ರವೀಂದ್ರ ರೈ ಅವರನ್ನು ಪೇಟೆ ತೊಡಿಸಿ, ಶಾಲು, ಹಾರ ಹಾಕಿ, ಫಲಪುಷ್ಪ, ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು. ಪ್ರಶಸ್ತಿ ಪುರಸ್ಕೃತ ಮಿಂಚಿನ ಓಟದ ಕೋಣ ‘ಚೆನ್ನನಿಗೂ ಸನ್ಮಾನ ನಡೆಯಿತು.