ಪ್ರಜ್ವಲ್ ರೇವಣ್ಣರಂತಹ ವ್ಯಕ್ತಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುತ್ತೇವೆ | ವೀಡಿಯೋ ಜೆಡಿಎಸ್ ಪಕ್ಷ ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಂಡಿದ್ದ ಅವಧಿಯದ್ದಾಗಿವೆ : ಪ್ರಧಾನಿ ಮೋದಿ

ಹೊಸದಿಲ್ಲಿ: ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ವೀಡಿಯೊ  ಪ್ರಕರಣದ ಕುರಿತು ಪ್ರಧಾನಿ ನರೇಂದ್ರ ಮೋದಿ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದು, ಪ್ರಜ್ವಲ್ ರೇವಣ್ಣ ಅವರಂತಹ ವ್ಯಕ್ತಿಗಳ ವಿರುದ್ಧ ನಾವು ಶೂನ್ಯ ಸಹಿಷ್ಣುರಾಗಿದ್ದೇವೆ. ಅಂತಹ ವ್ಯಕ್ತಿಗಳಿಗೆ ಸಹನೆ ತೋರಬೇಕಾದ ಅಗತ್ಯ ಇಲ್ಲ. ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳುತ್ತೇವೆ. ಆದರೆ ಕರ್ನಾಟಕದ ಕಾಂಗ್ರೆಸ್ ಸರ್ಕಾರವೇ  ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ದೇಶದಿಂದ ಹೊರಗೆ ಹೋಗಲು ಅವಕಾಶ ಮಾಡಿಕೊಟ್ಟಿದೆ  ಎಂದು ಹೇಳಿದ್ದಾರೆ.

ಪ್ರಜ್ವಲ್ ರೇವಣ್ಣ ಪ್ರಕರಣದ ಬಗ್ಗೆ ಮಾತನಾಡಿರುವ ಮೋದಿ, ಇದು ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದ ವಿಷಯವಾಗಿರುವ ಕಾರಣ ಕ್ರಮ ಜರುಗಿಸುವ ಜವಾಬ್ದಾರಿ ರಾಜ್ಯ ಸರ್ಕಾರದ ಮೇಲೆ ಇದೆ. ಸಹಸ್ರಾರು ವೀಡಿಯೋಗಳು ಇವೆ ಎಂದಾದರೆ ಅವು ಜೆಡಿಎಸ್ ಪಕ್ಷ ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಂಡಿದ್ದ ಅವಧಿಯದ್ದಾಗಿವೆ ಎನ್ನುವುದು ತಿಳಿದುಬಂದಿದೆ. ಅವರು ಅಧಿಕಾರದಲ್ಲಿ ಇದ್ದಾಗ ಆ ವೀಡಿಯೊಗಳನ್ನು ಒಟ್ಟುಗೂಡಿಸಿಕೊಂಡು, ಈಗ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಒಕ್ಕಲಿಗರು ಪ್ರಾಬಲ್ಯವಿರುವ  ಕ್ಷೇತ್ರದಲ್ಲಿ ಆ ವೀಡಿಯೊಗಳನ್ನು ಬಿಡುಗಡೆ ಮಾಡಿದ್ದಾರೆ  ಎಂದು ಮೋದಿ ಆರೋಪಿಸಿದ್ದಾರೆ.

ಆತ ದೇಶದಿಂದ ಹೊರಹೋದ  ಬೆನ್ನಲ್ಲಿಯೇ ಈ ವೀಡಿಯೊಗಳನ್ನು ಬಿಡುಗಡೆ ಮಾಡಲಾಗಿದ್ದು, ಇಡೀ ಬೆಳವಣಿಗೆ ಬಹಳ ಅನುಮಾನಾಸ್ಪದವಾಗಿದೆ. ರಾಜ್ಯ ಸರಕಾರಕ್ಕೆ ಮಾಹಿತಿ ಇದ್ದಿದ್ದರೆ ನಿಗಾ ಇಡಬೇಕಿತ್ತು. ವಿಮಾನ ನಿಲ್ದಾಣದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಬೇಕಿತ್ತು ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.



































 
 

ನೀವು (ಕಾಂಗ್ರೆಸ್ ಸರ್ಕಾರ) ಏನನ್ನೂ ಮಾಡಲಿಲ್ಲ. ಕನಿಷ್ಠ ಪಕ್ಷ ಕೇಂದ್ರ ಸರ್ಕಾರಕ್ಕೂ ಇದರ ಬಗ್ಗೆ ಮಾಹಿತಿಯೂ ನೀಡಲಿಲ್ಲ. ಅಂದರೆ ಇದು ಪೊಲಿಟಿಕಲ್ ಗೇಮ್ ಆಗಿತ್ತು. ಅವರೊಂದಿಗೆ ಮೈತ್ರಿ ಇದ್ದ ಕಾಲದಿಂದಲೂ  ಈ ವೀಡಿಯೊಗಳನ್ನು ಸಂಗ್ರಹಿಸಿ ಇಡಲಾಗಿತ್ತು. ಹಾಗಂತ ನಮ್ಮ ಅಪರಾಧಿಗಳನ್ನು ಬಿಡಬಾರದು ಎನ್ನುವುದಷ್ಟೇ ನಮ್ಮ ಉದ್ದೇಶ. ನಮ್ಮ ದೇಶದಲ್ಲಿ ಇಂತಹ ರಾಜಕೀಯ ಕಾರ್ಯತೆ ಇದೆ ಎಂದು ವಾಗ್ದಾಳಿ ನಡೆಸಿದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top