ಅವಿವಾಹಿತ ಯುವಕ ನೇಣು ಬಿಗಿದು ಆತ್ಮಹತ್ಯೆ

ಬಂಟ್ವಾಳ : ಬಿ.ಸಿ.ರೋಡಿನ ಹೆಸರಾಂತ ಹೋಟೆಲ್ ಒಂದರಲ್ಲಿ ತಂಗಿದ್ದ ಅವಿವಾಹಿತ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಮಂಗಳೂರು ಅತ್ತಾವರ ನಿವಾಸಿ ಪ್ರಜ್ವಲ್ (30) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಪ್ರಜ್ವಲ್ ಮೇ 5 ರಂದು ಬಿ.ಸಿರೋಡಿನ ಖಾಸಗಿ ಬಸ್‌ ನಿಲ್ದಾಣದ ಹತ್ತಿರವಿರುವ ಹೋಟೆಲ್ ಕೃಷ್ಣಿ ಮಾದಲ್ಲಿ ರೂಮ್ ಮಾಡಿದ್ದ, ಮೇ 6 ರಂದು ರಾತ್ರಿ ಊಟ ಮುಗಿಸಿ, ಬಾಗಿಲು ಹಾಕಿಕೊಂಡಿದ್ದ. ಇಂದು ಬೆಳಿಗ್ಗೆ ರೂಮ್ ನ ಬಾಗಿಲು ತೆರೆಯದ ಕಾರಣ ಹೋಟೆಲ್ ಸಿಬ್ಬಂದಿಗಳು ಕರೆದರೂ ಯಾವುದೇ ಸ್ಪಂದನೆ ಇಲ್ಲದ ಕಾರಣ ಪೊಲೀಸರಿಗೆ ಮಾಹಿತಿ ನೀಡಿ ಬಾಗಿಲು ತೆರೆದಾಗ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹದ ಪತ್ತೆಯಾಗಿದೆ.

ಓನ್ ಲೈನ್ ಕಂಪೆನಿಯೊಂದರಲ್ಲಿ ಉದ್ಯೋಗದಲ್ಲಿದ್ದ ಪ್ರಜ್ವಲ್ ಇತ್ತೀಚಿನ ದಿನಗಳಲ್ಲಿ ಮಾನಸಿಕವಾಗಿ ತೀವ್ರವಾಗಿ ನೊಂದಿದ್ದರು ಎನ್ನಲಾಗಿದೆ. ತಾನು ಕೆಲಸ ಮಾಡಿಕೊಂಡಿದ್ದ ಕಂಪೆನಿಯ ಮಾಲಕರಿಂದ 60 ಸಾವಿರ ಸಾಲ ಪಡೆದು ಬಳಿಕ ಹಣ ಹೊಂದಿಸಲಾಗದೆ, ಸರಿಯಾದ ಸಮಯಕ್ಕೆ ಹಿಂದಿರುಗಿಸಲಾಗಿಲ್ಲ ಎಂಬ ಕಾರಣಕ್ಕೆ ಕೊರಗುತ್ತಿದ್ದರು ಎಂದು ಹೇಳಲಾಗಿದೆ.



































 
 

ಸಾಲದ ವಿಚಾರವಲ್ಲದೆ ಪ್ರೀತಿಸಿದ ಯುವತಿ ಕೈಕೊಟ್ಟಿದ್ದು, ಪ್ರೇಮ ವೈಫಲ್ಯದ ಕಾರಣವನ್ನು ಎದುರಿಸುತ್ತಿದ್ದರು ಎಂದು ಮೂಲಗಳು ತಿಳಿಸಿವೆ. ಮಾನಸಿಕವಾಗಿ ನೊಂದಿದ್ದ ಹಿನ್ನೆಲೆ ಪ್ರಜ್ವಲ್ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದು, ಆತ್ಮಹತ್ಯೆ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

ಘಟನಾ ಸ್ಥಳಕ್ಕೆ ಬಂಟ್ವಾಳ ನಗರ ಠಾಣೆಯ ಪೊಲೀಸ್‌ ಇನ್ಸೆಕ್ಟ‌ರ್ ಆನಂತಪದ್ಮನಾಭ ಭೇಟಿ ನೀಡಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top