ಸುಳ್ಯ: ಕಾಲೇಜು ವಿದ್ಯಾರ್ಥಿಯೋರ್ವಳು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಪಾಜೆ ಗ್ರಾಮದ ದೊಡ್ಡಡ್ಕದಲ್ಲಿ ಇಂದು ನಡೆದಿದೆ.
ಸುಳ್ಯ ಸರಕಾರಿ ಪಿಯು ಕಾಲೇಜಿನ ವಿದ್ಯಾರ್ಥಿನಿ ರಶ್ಮಿತಾ (16) ಆತ್ಮಹತ್ಯೆ ಮಾಡಿಕೊಂಡವರು.
ಸಂಪಾಜೆ ಗ್ರಾಮದ ದೊಡ್ಡಡ್ಕ ಗೋಪಾಲ ಹಾಗೂ ಬಾಬಿ ದಂಪತಿಯ ಪುತ್ರಿಯಾಗಿರುವ ರಶ್ಮಿತಾ ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಸುಳ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
























