ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ವ್ಯವಹಾರ ಅಧ್ಯಯನ ವಿಭಾಗದ ವಿದ್ಯಾರ್ಥಿಗಳ ಕೌಶಲ್ಯ ಅಬಿವೃದ್ದಿ ಹೆಚ್ಚಿಸುವ ನಿಟ್ಟಿನಲ್ಲಿ ‘ಫೂಡಿ ಪ್ರೆನ್ಯೂರ್’ ಫುಡ್ ಫೆಸ್ಟ್ ನ್ನು ಗುರುವಾರ ಆಯೋಜಿಸಲಾಯಿತು.
ವಿದ್ಯಾರ್ಥಿಗಳು ಸ್ಥಳದಲ್ಲೇ ತಯಾರಿಸಿದ ವಿವಿಧ ಬಗೆಯ ಮೊಜಿಟೋಗಳು, ಆರೋಗ್ಯಕರ ಪೇಯ ಹಾಗೂ ಆರೋಗ್ಯವರ್ಧಕ ತಿಂಡಿ ತಿನಸುಗಳ ಸ್ಟಾಲ್ ಗಳು, ಮನೆಯಲ್ಲಿ ತಯಾರಿಸಿದಂತಹ ಕರಾವಳಿಯ ವಿಶೇಷ ಖಾದ್ಯಗಳ ಸ್ಟಾಲ್ ಗಳು, ಬ್ರೌನಿಗಳ ಮತ್ತು ಚಾಟ್ ಸ್ಟಾಲ್ ಗಳಿದ್ದವು. ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ತಮ್ಮ ಬಿಡುವಿನ ಸಂದರ್ಭದಲ್ಲಿ ಹಾಗೂ ಮಧ್ಯಾಹ್ನದ ಭೋಜನ ವಿರಾಮದ ವೇಳೆ ಸ್ಟಾಲ್ ಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು.
ಉದ್ಘಾಟನಾ ಸಮಾರಂಭದಲ್ಲಿ ಕಾಲೇಜಿನ ಪ್ರಾಂಶುಪಾಲ ವಂ.ಡಾ.ಆ್ಯಂಟನಿ ಪ್ರಕಾಶ್ ಮೊಂತೆರೊ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಕ್ರಿಯಾತ್ಮಕ ಮತ್ತು ಸೃಜನಾತ್ಮಕ ಗುಣಗಳನ್ನು ರೂಪಿಸುವಲ್ಲಿ ಇಂತಹ ಕಾರ್ಯಕ್ರಮಗಳು ಮಾದರಿಯಾಗಲಿದ್ದು, ಕಾರ್ಯಕ್ರಮ ಆಯೋಜಿಸಿದ್ದ ವ್ಯವಹಾರ ಆಡಳಿತ ವಿಭಾಗದ ವಿದ್ಯಾರ್ಥಿ ಮತ್ತು ಶಿಕ್ಷಕ ವೃಂದವನ್ನು ಶ್ಲಾಘಿಸಿದರು.
ಹರ್ಷಿತಾ ಮತ್ತು ಬಳಗ ಪ್ರಾರ್ಥಿಸಿದರು. ಕಾಲೇಜಿನ ವ್ಯವಹಾರ ಆಡಳಿತ ವಿಭಾಗ ಮುಖ್ಯಸ್ಥ ರಾಧಾಕೃಷ್ಣ ಗೌಡ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾಲೇಜಿನ ವ್ಯವಹಾರ ಅಧ್ಯಯನ ಸಂಘದ ಅಧ್ಯಕ್ಷ ಸುಹೇಲ್ ವಂದಿಸಿದರು. ವ್ಯವಹಾರ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಪ್ರಶಾಂತ್ ಕಾರ್ಯಕ್ರಮ ನಿರೂಪಿಸಿದರು. ಸಹಾಯಕ ಪ್ರಾಧ್ಯಾಪಕರಾದ ಪುಷ್ಪಾ ಎನ್., ಅಭಿಷೇಕ್ ಸುವರ್ಣ ಉಪಸ್ಥಿತರಿದ್ದರು.