ಹೈಕೋರ್ಟ್ ಮಹಿಳಾ ವಕೀಲರೊಬ್ಬರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ !

ಬೆಂಗಳೂರು: ಹೈಕೋರ್ಟ್ ಮಹಿಳಾ ವಕೀಲೆಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಸಂಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಚೈತ್ರಾ ಬಿ.ಗೌಡ (35) ಮೃತಪಟ್ಟ ವಕೀಲೆ.

ಮನೆಯೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಹೈಕೋರ್ಟ್‌ನಲ್ಲಿ ಅಡ್ವೋಕೇಟ್ ಆಗಿದ್ದ ಚೈತ್ರಾ, ಅಣ್ಣಯ್ಯ ಲೇಔಟ್‌ನಲ್ಲಿ ವಾಸವಿದ್ದರು. ಅವರ ಪತಿ ಪತಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ನಿಗಮದಲ್ಲಿ (ಕೆಐಡಿಬಿ) ಅಸ್ಪಿಸೆಂಟ್ ಕಮೀಷನರ್ ಆಗಿದ್ದಾರೆ.



































 
 

ವೃತ್ತಿಯಲ್ಲಿ ವಕೀಲೆಯಾಗಿದ್ದರೂ ಪ್ರವೃತ್ತಿಯಲ್ಲಿ ಮಾಡೆಲ್ ಆಗಿ ಗುರುತಿಸಿಕೊಂಡಿದ್ದರು. ದಂಪತಿ ನಡುವೆ ವೈಮನಸ್ಸು ಇತ್ತು ಎನ್ನಲಾಗಿದೆ. ಮನೆಯವರು ನೀಡಿದ ಮಾಹಿತಿ ಮೇರೆಗೆ ಪೊಲೀಸರು ಸ್ಥಳಕ್ಕೆ ಬಂದಿದ್ದಾರೆ. ಮೃತದೇಹವನ್ನ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸಂಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top