ಬೆಂಗಳೂರು: ಯುವತಿಯೊಬ್ಬಳು ಮನೆಯಲ್ಲಿ ಸಾವನ್ನಪ್ಪಿದ ಘಟನೆ ಬೆಂಗಳೂರು ಸುಬ್ರಹ್ಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತಪಟ್ಟ ಯುವತಿ ಪ್ರಭುಧ್ಯಾ (21) ಎಂದು ಗುರುತಿಸಲಾಗಿದೆ.
ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದ ಪ್ರಭುಧ್ಯಾ ಶವ ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಬುಧವಾರ ಸಂಜೆ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಆರಂಭಿಸಿದ್ದಾರೆ.