ಎಸ್.ಎಸ್.ಎಲ್.ಸಿ ಯಲ್ಲಿ ಅತೀ ಹೆಚ್ಚು ಅಂಕ ಪಡೆದ ತಾಲೂಕಿನ ವಿದ್ಯಾರ್ಥಿಗಳಿಗೆ ಸನ್ಮಾನ

ಪುತ್ತೂರು: ನಮ್ಮ ದೇಶದ ಭವಿಷ್ಯ ವಿದ್ಯಾರ್ಥಿಗಳ ಕೈಯಲ್ಲಿದೆ. ಅವರ ಭವಿಷ್ಯಕ್ಕೆ ನಾವು ದಾರಿಯಾಗಬೇಕು. ಈ ನಿಟ್ಟಿನಲ್ಲಿ ಎಸ್.ಎಸ್.ಎಲ್.ಸಿ ಯಲ್ಲಿ ಅತ್ಯಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಗೌರವಿಸುತ್ತಿದ್ದೇನೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ತಾಲೂಕಿನ 6 ಮಂದಿ ವಿದ್ಯಾರ್ಥಿಗಳನ್ನು ಪುತ್ತೂರು ರೈ ಎಸ್ಟೇಟ್ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಕಚೇರಿಯಲ್ಲಿ ಅವರು ಸನ್ಮಾನಿಸಿ ಗೌರವಿಸಿದರು. ಪುತ್ತೂರಿನ ಕೀರ್ತಿಗೆ ಭಾಜನರಾದ ವಿದ್ಯಾರ್ಥಿಗಳನ್ನು ಗೌರವಿಸುವುದು, ಅವರಿಗೆ ಅವರ ಮುಂದಿನ ಶೈಕ್ಷಣಿಕ ಜೀವನದಲ್ಲಿ ಉತ್ತೇಜನ ನೀಡುವುದು ನಮ್ಮೆಲ್ಲರ ಕರ್ತವ್ಯ. ವಿದ್ಯಾರ್ಥಿಗಳು ನನ್ನನ್ನು ಯಾವತ್ತು ಬೇಕಾದರೂ ಭೇಟಿ ಮಾಡಬಹುದು. ಪ್ರತಿ ಸೋಮವಾರ ನಾನು ಕಚೇರಿಯಲ್ಲಿರುತ್ತೇನೆ. ನನ್ನಿಂದ ವೈಯುಕ್ತಿಕ ಸಹಾಯ ಮಾಡಬಲ್ಲೆ. ಅದರಲ್ಲೂ ಬೇಸಿಕ್ ಸಮಸ್ಯೆ ಇದ್ದವರಿಗೆ ಕಂಡಿತಾ ಸಹಾಯ ಮಾಡುತ್ತೇನೆ. ಇವತ್ತು ವಿದ್ಯಾರ್ಥಿಗಳ ಅಂಕ ಗಳಿಸುವಿಕೆಯಲ್ಲಿ ಪೋಷಕರ ಮತ್ತು ಶಿಕ್ಷಕರ ಪಾತ್ರವೂ ಇದೆ. ಅವರಿಗೂ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭ ಕೆಯ್ಯೂರು ಕೆಪಿಎಸ್ ಸ್ಕೂಲ್ ನ ಕಾರ್ಯಾಧ್ಯಕ್ಷ ಎ.ಕೆ.ಜಯರಾಮ ರೈ, ಉಮಾನಾಥ್, ಪ್ರಹ್ಲಾದ್ ಬೆಳ್ಳಿಪ್ಪಾಡಿ, ರಿತೇಶ್ ಶೆಟ್ಟಿ, ರಜಾಕ್ ಬಪ್ಪಳಿಗೆ, ಯುವ ಕಾಂಗ್ರೆಸ್ ಉಪಾಧ್ಯಕ್ಷ ಅಖಿಲ್, ಶಿಕ್ಷಕಿ ಸೌಮ್ಯ ಶೆಟ್ಟಿ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು. ನಿಹಾಲ್ ಶೆಟ್ಟಿ ಸ್ವಾಗತಿಸಿ, ಯೋಗೀಶ್ ಸಾಮಾನಿ ವಂದಿಸಿದರು.



































 
 

ವಿದ್ಯಾರ್ಥಿಗಳಿಗೆ ಸನ್ಮಾನ:

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 621 ಅಂಕ ಗಳಿಸಿದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಶ್ರೀಯಾ, 620 ಅಂಕ ಗಳಿಸಿದ ಬಾಲಾಜಿ, 619 ಅಂಕ ಗಳಿಸಿದ ಉಪ್ಪಿನಂಗಡಿ ಇಂದ್ರಪ್ರಸ್ತ ವಿದ್ಯಾಲಯದ ಅಕ್ಷತಾ ಗಂಗಾ, 615 ಅಂಕ ಗಳಿಸಿದ ಸರಕಾರಿ ಕೆಯ್ಯೂರು ಕೆಪಿಎಸ್ ಶಾಲೆಯ ಸೌಜನ್ಯ ರೈ, 611 ಅಂಕ ಗಳಿಸಿದ ಡಾ.ಬಿ.ಆರ್ ಅಂಬೇಡ್ಕರ್ ವಸತಿಯುತ ಶಾಲೆಯ ಬೀರಪ್ಪ, 612 ಅಂಕ ಗಳಿಸಿದ ಸೈಂಟ್ ವಿಕ್ಟರ್ ಶಾಲೆಯ ಅಪೂರ್ವ ಅವರನ್ನು ಶಾಸಕರು ಶಾಲು ಹೊದಿಸಿ, ಫಲಪುಷ್ಪ ನೀಡಿ ಗೌರವಿಸಿದರು. ಈ ಸಂದರ್ಭ ಶಿಕ್ಷಕರನ್ನೂ ಶಾಸಕರು ಗೌರವಿಸಿದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top