ಪುತ್ತೂರು: ಪತ್ರಿಕಾಗೋಷ್ಠಿ ವಿಚಾರವನ್ನು ಮುಂದಿಟ್ಟುಕೊಂಡು ಮಾಜಿ ಶಾಸಕರ ಕುರಿತು ಅವಹೇಳನಕಾರಿಯಾಗಿ ಸಾನಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ ಹಾಗೂ ಫೋನ್ ಮೂಲಕ ಜೀವ ಬೆದರಿಕೆ ಹಾಕಿದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸುವಂತೆ ಒತ್ತಾಯಿಸಲು ಮೇ 18 ರಂದು ಸಭೆ ಕರೆಯಲಾಗಿದೆ.
ಬೆಳಿಗ್ಗೆ 10 ಗಂಟೆಗೆ ಪಕ್ಷದ ಕಚೇರಿಯಲ್ಲಿ ತುರ್ತು ಸಭೆ ಕರೆಯಲಾಗಿದ್ದು, ಪಕ್ಷದ ಪ್ರಮುಖರು, ಕಾರ್ಯಕರ್ತರು, ಜನಪ್ರತಿನಿಧಿಗಳು ಉಪಸ್ಥಿತರಿರಬೇಕೆಂದು ಬಿಜೆಪಿ ನಗರ ಹಾಗೂ ಗ್ರಾಮಾಂತರ ಮಂಡಲದ ಪ್ರಕಟಣೆಯಲ್ಲಿ ತಿಳಿಸಿದೆ.
ಮೇ 17 ಶುಕ್ರವಾರ ಮಾಜಿ ಶಾಸಕ ಸಂಜೀವ ಮಠಂದೂರು ಅವರು ಪತ್ರಿಕಾಗೋಷ್ಠಿಯೊಂದನ್ನು ಏರ್ಪಡಿಸಿದ್ದು, ಹಾಲಿ ಶಾಸಕರಿಗೆ ಮಾತೃ ಪಕ್ಷದ ಮೇಲಿನ ಮಮತೆ ಹೋಗಿಲ್ಲ. ಪಕ್ಷಕ್ಕೆ ಮರಳುವ ಲಕ್ಷಣ ಕಾಣುತ್ತಿದೆ ಎಂದು ಉಲ್ಲೇಖಿಸಿದ್ದರು. ಈ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿತ್ತು. ಈ ವಿಚಾರವನ್ನಿಟ್ಟುಕೊಂಡು ವ್ಯಕ್ತಿಯೊಬ್ಬರು ಫೋನ್ ಮೂಲಕ ಮಾಜಿ ಶಾಸಕರಿಗೆ ಜೀವ ಬೆದರಿಕೆ ಹಾಕಿರುವ ಕುರಿತು ಖಂಡಿಸಿ ಮೊಕದ್ದಮೆ ದಾಖಲಿಸಲು ಒತ್ತಾಯಿಸಿ ಸಭೆಯನ್ನು ಕರೆಲಾಗಿದೆ.
























