ಕರ್ನಾಟಕದಲ್ಲಿ ಹೆಣ್ಣು ಮಕ್ಕಳು ಕೊಲೆ ಭಾಗ್ಯ ಕಾಣುವಂತಾಗಿದೆ | ರಾಜ್ಯ ಸರಕಾರದ ವಿರುದ್ಧ ಕಿಡಿ ಕಾರಿದ ಬಿ.ವೈ.ವಿಜಯೇಂದ್ರ

ಬೆಂಗಳೂರು : ರಾಜ್ಯದಲ್ಲಿ ಸದ್ಯದ ಪರಿಸ್ಥಿತಿಯಲ್ಲಿ ಮಹಿಳೆಯರು, ವಿದ್ಯಾರ್ಥಿಗಳು ಮನೆಯಿಂದ ಆಚೆ ಬರಲು ಭಯಪಡುವ ವಾತಾವರಣ ನಿರ್ಮಾಣವಾಗಿದೆ. ದುಷ್ಟ ಹಂತಕರಿಗೆ ಯಾರ ಭಯವೂ ಇಲ್ಲದಂತಾಗಿದ್ದು, ಕೊಲೆ, ದಾಂಧಲೆ, ದರೋಡೆ ಪ್ರಕರಣಗಳು ವಿಪರೀತ ಪ್ರಮಾಣದಲ್ಲಿ ಏರಿಕೆ ಆಗಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.

‘ಎಕ್ಸ್’ ಮೂಲಕ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಅವರು, ಸಾಮಾಜಿಕ ಭದ್ರತೆ ಕಲ್ಪಿಸಿ ಜನರಿಗೆ ಅಭಯ ತುಂಬಬೇಕಾದ ಗೃಹ ಇಲಾಖೆ ಈ ನಿಟ್ಟಿನಲ್ಲಿ ಯಾವುದೇ ಹೆಜ್ಜೆ ಇಡದ ಕಾರಣ ನಾಗರಿಕ ಸಮಾಜದ ವಿಶ್ವಾಸವನ್ನು ಕಳೆದುಕೊಂಡಿದೆ ಎಂದು ಹೇಳಿದ್ದಾರೆ.

ಕರ್ನಾಟಕದಲ್ಲಿ ಹೆಣ್ಣು ಮಕ್ಕಳು ಕೊಲೆ ಭಾಗ್ಯ ಕಾಣುವಂತಾಗಿದೆ. ಸಾಮಾಜಿಕ ಭದ್ರತೆಗೆ ಹೆಸರಾಗಿದ್ದ ನಮ್ಮ ಹೆಮ್ಮೆಯ ಕರ್ನಾಟಕ ಕಾಂಗ್ರೆಸ್ ಆಡಳಿತದ ಒಂದು ವರ್ಷದಲ್ಲಿ ಕ್ರಿಮಿನಲ್, ಕೊಲೆಗಡುಕರ ತಾಣವನ್ನಾಗಿಸುತ್ತಿದೆ. ‘ಗೃಹಲಕ್ಷ್ಮಿ’,  ‘ಗೃಹಜ್ಯೋತಿ’ ಯೋಜನೆಗಳನ್ನು ಜಾರಿ ತಂದಿರುವುದಾಗಿ ಬೀಗುವ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಹಾಡುಹಗಲೇ ಅಮಾಯಕ ಹೆಣ್ಣು ಮಕ್ಕಳನ್ನು ಭೀಕರವಾಗಿ ಹತ್ಯೆಗೈಯ್ಯಲಾಗುತ್ತಿದೆ. ಮನೆಗಳಿಗೆ ನುಗ್ಗಿ ಗೃಹಲಕ್ಷ್ಮಿಯರನ್ನು ಚಾಕುವಿನಿಂದ ಇರಿದು ಕೊಲ್ಲಲಾಗುತ್ತಿದೆ. ಭಾಗ್ಯಲಕ್ಷ್ಮಿಯರನ್ನು ಕಳೆದುಕೊಂಡ ಹೆತ್ತವರ ಆಕ್ರಂದನ ಅರಣ್ಯರೋದನವಾಗುತ್ತಿದೆ. ರಾಜ್ಯಾದ್ಯಂತ ಹೆಣ್ಣು ಮಕ್ಕಳ ಸರಣಿ ಕೊಲೆಗಳು, ಅನುಮಾನದ ಸಾವುಗಳು, ಲೈಂಗಿಕ ದೌರ್ಜನ್ಯ ಪ್ರಕರಣಗಳೇ ಹೆಚ್ಚಾಗುತ್ತಿದ್ದು ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದು ಬಿದ್ದಿದೆ’ ಎಂದು ಹೇಳಿದ್ದಾರೆ.































 
 

ಮುಖ್ಯಮಂತ್ರಿಯವರು ಸರಣಿ ಘಟನೆಗಳ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ ಎಂದು ಒತ್ತಾಯಿಸಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top