ವರ್ಗಾವಣೆ ಪತ್ರ ನೀಡದ ಮುಖ್ಯ ಶಿಕ್ಷಕರು | ವಿದ್ಯಾರ್ಥಿ ಡೆತ್ ನೋಟ್ ಬರೆದು ಆತ್ಮಹತ್ಯೆಗೆ ಶರಣು

ಉಡುಪಿ : ವರ್ಗಾವಣೆ ಪ್ರಮಾಣ ಪತ್ರ ನೀಡಿಲ್ಲ ಎಂದು ಎಸ್‌ಎಸ್‌ಎಲ್‌ಸಿಯಲ್ಲಿ ಉತ್ತೀರ್ಣನಾದ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ನಡೆದಿದೆ.

ಬೈಂದೂರು ಸರ್ಕಾರಿ ಪ್ರೌಢಶಾಲೆಯ ಹೈಸ್ಕೂಲ್ ವಿದ್ಯಾರ್ಥಿ ನಿತಿನ್ ಆಚಾರಿ ಆತ್ಮಹತ್ಯೆ ಮಾಡಿಕೊಂಡವ.

ವರ್ಗಾವಣೆ ಪ್ರಮಾಣ ಪತ್ರ ಟಿಸಿ ಕೊಡದೆ ಮುಖ್ಯ ಶಿಕ್ಷಕರು ಬೈದಿದ್ದಾರೆ ಎಂದು ಡೆತ್‍ ನೋಟ್ ಬರೆದಿಟ್ಟು ನಿತಿನ್ ಮನೆಯಲ್ಲಿ ಫ್ಯಾನ್ ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.







































 
 

ನಿತಿನ್ ಪಿಯುಸಿ ಸೇರ್ಪಡೆಯಾಗಲು ಟಿಸಿ ಪಡೆಯಲು ಶಾಲೆಗೆ ಹೋಗಿದ್ದಾನೆ. ಆದರೆ ಮುಖ್ಯ ಶಿಕ್ಷಕ ಸುರೇಶ್ ಭಟ್ ಟಿಸಿ ಕೊಡದೆ ಬೈದಿದ್ದಾರೆ. ಇದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಬಗ್ಗೆ ಡೆತ್‌ನಲ್ಲಿ ಉಲ್ಲೇಖಿಸಿದ್ದಾನೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top