ಲಾರಿ-ಓಮ್ನಿ ಭೀಕರ ಅಪಘಾತ | ನಾಲ್ವರು ಸ್ಥಳದಲ್ಲೇ ಮೃತ್ಯು | ಧರ್ಮಸ್ಥಳ ಮಂಜುನಾಥನ ದರ್ಶನ ಮಾಡಿ ತೆರಳುತ್ತಿರುವಾಗ ದುರ್ಘಟನೆ

ಲಾರಿ ಹಾಗೂ ಓಮ್ನಿ ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟು, ಮೂವರು ಗಂಭೀರ ಗಾಯಗೊಂಡ ಘಟನೆ ಚಿಕ್ಕಮಗಳೂರಿನಲ್ಲಿ ಇಂದು ನಡೆದಿದೆ.

ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದುಕೊಂಡು ವಾಪಸ್ ಆಗುತ್ತಿದ್ದ ವೇಳೆ ಈ ಭೀಕರ ಅಪಘಾತ ಸಂಭವಿಸಿದೆ.

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಭೀಕರ ಅಪಘಾತ ಹಿನ್ನೆಲೆ ರಾಷ್ಟ್ರೀಯ ಹೆದ್ದಾರಿ 173 ರಲ್ಲಿ ಫುಲ್ ಟ್ರಾಫಿಕ್ ಜಾಮ್ ಉಂಟಾಗಿದ್ದು, ಕೂಡಲೇ ಸ್ಥಳಕ್ಕೆ ಬಣಕಲ್ ಠಾಣೆಯ ಪೊಲೀಸರು ದೌಡಾಯಿಸಿ ರಸ್ತೆ ಕ್ಲಿಯರ್ ಮಾಡುತ್ತಿದ್ದಾರೆ.





























 
 

ಮೃತರು ಚಿತ್ರದುರ್ಗ ಮೂಲದವರಾಗಿದ್ದು, ಧರ್ಮಸ್ಥಳ ಮಂಜುನಾಥೇಶ್ವರ ದರ್ಶನ ಪಡೆದು ವಾಪಸ್ ಬರುವಾಗ ಈ ದುರ್ಘಟನೆ ಸಂಭವಿಸಿದೆ., ಘಟನೆಯಲ್ಲಿ ಒಂದೇ ಕುಟುಂಬದ ನಾಲ್ವರಲ್ಲಿ ಮೂವರು ಪುರುಷರು, ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ. ಇನ್ನು ಮೂವರ ಮೂವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ.

ಇನ್ನು ಘಟನೆಯಲ್ಲಿ ಮೂವರು ಗಂಭೀರ ಗಾಯಗೊಂಡಿದ್ದು, ಅವರನ್ನು ಮಂಗಳೂರು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮಂಗಳೂರು ವಿದ್ಯುತ್ ಸರಬರಾಜು ಕಂಪನಿಗೆ ಸೇರಿದ ಲಾರಿಯನ್ನು ಓವರ್ ಟೆಕ್ ಮಾಡಲು ಹೋಗಿ ಓಮಿನಿ ಡಿಕ್ಕಿ ಹೊಡೆದೆ.

ಡಿಕ್ಕಿ ಹೊಡೆದ ರಭಸಕ್ಕೆ ಓಮಿನಿ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಗುರುತು ಸಿಗದಂತಾಗಿದೆ.  ಇಂದು ಬೆಳಗ್ಗೆ ರಾಣೇಬೆನ್ನೂರಿನಲ್ಲಿ ಸಂಭವಿಸಿದ ಇನ್ನೊಂದು ರಸ್ತೆ ಅಪಘಾತದಲ್ಲಿ ತಿರುಪತಿಯ ವೆಂಕಟರಮಣ ದರ್ಶನಕ್ಕೆ ಹೋಗುತ್ತಿದ್ದ ನಾಲ್ವರು ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ಇದೀಗ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದುಕೊಂಡು ವಾಪಸ್ ಹಿಂದಿರುಗುವಾಗ ಚಿತ್ರದುರ್ಗದ ಮೂಲದ ನಾಲ್ವರು ದುರಂತ ಅಂತ್ಯ ಕಂಡಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top