ಪುತ್ತೂರು: ಜನಾರ್ದನದುರ್ಗ ಅವರ ‘ಶಾಂತೇಶ್ವರನ ವಚನಗಳು’ ಕೃತಿ ಲೋಕಾರ್ಪಣೆ ಹಾಗೂ ಕವಿಗೋಷ್ಠಿ ಮೇ 27 ಸೋಮವಾರ ಮಧ್ಯಾಹ್ನ 2.30 ಕ್ಕೆ ಪುತ್ತೂರು ಅನುರಾಗ ವಠಾರದಲ್ಲಿ ನಡೆಯಲಿದೆ.
ವಿಶ್ರಾಂತ ಪ್ರಾಂಶುಪಾಲ ಪ್ರೊ.ಝೇವಿಯರ್ ಡಿ’ಸೋಜ ದೀಪ ಪ್ರಜ್ವಲನೆ ಮಾಡಲಿದ್ದು, ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್. ಕೃತಿ ಬಿಡುಗಡೆ ಮಾಡುವರು. ಹಿರಿಯ ಸಾಹಿತಿ ಡಾ.ವರದರಾಜ ಚಂದ್ರಗಿರಿ ಕೃತಿ ಪರಿಚಯ ಮಾಡಲಿದ್ದು, ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಮ ಕೆ. ಕೃತಿಕಾರರ ಪರಿಚಯ ಮಾಡುವರು. ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ಸಮಾರಂಭದ ಅಧ್ಯಕ್ಷತೆ ವಹಿಸುವರು.
ಪದವೀಧರ ಶಿಕ್ಷಕ, ಲೇಖಕ ಜನಾರ್ದನ ದುರ್ಗ ಪ್ರಾಸ್ತಾವಿಕವಾಗಿ ಮಾತನಾಡುವರು. ಕವಿಗೋಷ್ಠಿಯ ಅಧ್ಯಕ್ಷತೆಯನ್ನು ಸಾಹಿತಿ, ಶಿಕ್ಷಕ ಪಿ.ಎಸ್.ನಾರಾಯಣ ಭಟ್ ವಹಿಸಲಿದ್ದು, ಶಾರದಾ ತುಳುನಾಡು ನಿರ್ವಹಣೆ ಮಾಡುವರು.