ಪುತ್ತೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಫೆ. 11ರಂದು ಪುತ್ತೂರಿಗೆ ಆಗಮಿಸಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಕ್ಯಾಂಪ್ಕೋ ಚಾಕೊಲೇಟ್ ಫ್ಯಾಕ್ಟರಿಗೆ ಭೇಟಿ ನೀಡಲಿರುವ ಅಮಿತ್ ಶಾ ಅವರು, ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಆಶ್ರಯದಲ್ಲಿ ನಡೆಯಲಿರುವ ಕೃಷಿ ಯಂತ್ರ ಮೇಳದಲ್ಲಿ ಭಾಗವಹಿಸಲಿದ್ದಾರೆ.
ಬಿಜೆಪಿ ಸಂಕಲ್ಪ ಅಭಿಯಾನ ಪುತ್ತೂರು ತಾಲೂಕಿನಾದ್ಯಂತ ನಡೆಯುತ್ತಿದ್ದು, ಫೆ. 11ರಂದು ಪುತ್ತೂರಿನಲ್ಲಿ ನಡೆಯಲಿರುವ ಅಭಿಯಾನದಲ್ಲಿ ಅಮಿತ್ ಶಾ ಅವರು ಭಾಗವಹಿಸಲಿದ್ದಾರೆ ಎಂದು ಹೇಳಲಾಗಿದೆ.