ಇಂದಿನಿಂದ ಸಂಸತ್ತಿನ ಬಜೆಟ್‌ ಅಧಿವೇಶನ

ಉಭಯ ಸದನಗಳನ್ನುದ್ದೇಶಿಸಿ ರಾಷ್ಟ್ರಪತಿ ಭಾಷಣ

ಹೊಸದಿಲ್ಲಿ : ಸಂಸತ್ ಬಜೆಟ್ ಅಧಿವೇಶನ ಇಂದಿನಿಂದ‌ ಆರಂಭವಾಗಲಿದೆ‌. ಬುಧವಾರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸಲಿದ್ದು, ಇಂದು ರಾಷ್ಟ್ರಪತಿ ಜಂಟಿ ಸದನ ಉದ್ದೇಶಿಸಿ ಮಾತನಾಡಲಿದ್ದಾರೆ. ಜತೆಗೆ ಇಂದು ನಿರ್ಮಲಾ‌‌ ಸೀತಾರಾಮನ್ ಆರ್ಥಿಕ ಸಮೀಕ್ಷಾ ವರದಿ ಮಂಡಿಸಲಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಸಂಸತ್ ನ ಜಂಟಿ ಸದನವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ರಾಷ್ಟ್ರಪತಿ ಭಾಷಣದ ಬಳಿಕ ನಿರ್ಮಲಾ ಸೀತಾರಾಮನ್ ಆರ್ಥಿಕ ಸಮೀಕ್ಷೆ ಮಂಡಿಸಲಿದ್ದಾರೆ‌.
ಜಾಗತಿಕ ಆರ್ಥಿಕ ಹಿಂಜರಿತದ ಕಾರಣದಿಂದಾಗಿ ಹಣಕಾಸು ಸಚಿವರು ವಿತ್ತೀಯ ಕೊರತೆಯನ್ನು ಕಾಪಾಡಿಕೊಳ್ಳುವುದರ ಜತೆಗೆ ಜನಪರ ಕಾರ್ಯಸೂಚಿ ನಡುವೆ ಸಮತೋಲನವನ್ನು ಕಂಡುಕೊಳ್ಳಬೇಕಿದ್ದು, ಉದ್ಯೋಗ ಸೃಷ್ಟಿ, ಮೂಲಸೌಕರ್ಯ, ಉತ್ಪಾದನೆ, ಕೃಷಿ ಮತ್ತು ಇತರ ಪ್ರಮುಖ ಕ್ಷೇತ್ರಗಳಿಗೆ ಸುಧಾರಿತ ಹಣವನ್ನು ಕೇಂದ್ರೀಕರಿಸುವ ನಿರೀಕ್ಷೆಯಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಎರಡನೇ ಅವಧಿಯ ಸರ್ಕಾರ ಕೊನೆಯ ಪೂರ್ಣ ಬಜೆಟ್ ಇದಾಗಿದೆ. ಈ ಹಿನ್ನೆಲೆಯಲ್ಲಿ ನೌಕರರು ಮತ್ತು ಹಿರಿಯ ನಾಗರಿಕರು ಸೇರಿದಂತೆ ಸಾಮಾನ್ಯ ಜನರಿಗೆ ವಿವಿಧ ತೆರಿಗೆ ಪರಿಹಾರ ಕ್ರಮಗಳನ್ನು ಸೀತಾರಾಮನ್ ಘೋಷಿಸುವ ನಿರೀಕ್ಷೆಯಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top