ವಾಹನ ಓಡಾಟದ ನಡುವೆಯೇ ರಸ್ತೆಯಲ್ಲಿ ನಮಾಜ್‍ | ಎಲ್ಲೆಡೆ ವ್ಯಾಪಕ ಆಕ್ರೋಶ

ಮಂಗಳೂರು: ವಾಹನ ಓಡಾಟದ ನಡುವೆಯೇ ರಸ್ತೆಯಲ್ಲಿ ಕುಳಿತು ನಮಾಜ್‍ ಮಾಡಿದ ಘಟನೆ ಮಂಗಳೂರಿನ ಕಂಕನಾಡಿ ಮಸೀದಿ ಎದುರು ನಡೆದಿದ್ದು, ಈ ಕುರಿತು ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇತ್ತೀಚಿಗೆ ಬೆಂಗಳೂರಿನಲ್ಲಿ ಮುಸ್ಲಿಮರು ನಡುರಸ್ತೆಯಲ್ಲಿ ಕೂತು ನಮಾಜ್ ಮಾಡುತ್ತಿದ್ದ ಭಾವಚಿತ್ರ ಎಲ್ಲಡೆ ಹರದಾಡಿತ್ತು. ಇದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಮಂಗಳೂರಿನ ಕಂಕನಾಡಿಯಲ್ಲಿ ನಡು ರಸ್ತೆಯಲ್ಲೇ ಮುಸ್ಲಿಮರು ನಮಾಜ್ ಮಾಡಿದ್ದಾರೆ. ಕಳೆದ ಶುಕ್ರವಾರ ಘಟನೆ ನಡೆದಿದ್ದು, ನಮಾಜ್ ಮಾಡಿದ ವಿಡಿಯೋ ಎಲ್ಲಡೆ ಹರಿದಾಡುತ್ತಿದೆ.

ಯುವಕರು ನಡುರಸ್ತೆಯಲ್ಲೇ ನಮಾಜ್‌ಗೆ ಕುಳಿತಿರುವುದರಿಂದ ವಾಹನ ಸವಾರರು ಮುಂದೆ ಚಲಿಸಲು ತೊಂದರೆಯಾಗಿದೆ. ಯೂಟರ್ನ್ ತೆಗೆದುಕೊಳ್ಳುವ ದೃಶ್ಯವೂ ಸ್ಪಷ್ಟವಾಗಿ ಸೆರೆಯಾಗಿದೆ. ಈ ಘಟನೆಯ ವಿಡಿಯೋ ಶೇರ್ ಮಾಡಿಕೊಂಡು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.





























 
 

ನಮಾಜ್ ಮಾಡಲೆಂದೇ ಮಸೀದಿ ಇರುವುದು ಆದರೆ ಮಸೀದಿ ಬಿಟ್ಟು ನಡುರಸ್ತೆಗೆ ಕುಳಿತು ನಮಾಜ್ ಮಾಡಿದರೆ ವಾಹನಗಳು ಸಂಚರಿಸುವುದು ಹೇಗೆಂದು ಪ್ರಶ್ನಿಸಿದ್ದಾರೆ. ರಸ್ತೆ ಮಧ್ಯೆ ನಮಾಜ್ ಮಾಡುತ್ತಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಕದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top