ಬೆಂಗಳೂರು : ಬೆಂಗಳೂರು ನಗರದ ಹೊಂಡ-ಗುಂಡಿಗಳನ್ನು ಮುಚ್ಚಲೂ ಇವರ ಬಳಿ ದುಡ್ಡಿಲ್ಲ. ಸರಕಾರದ ಧೋರಣೆಯನ್ನು ಖಂಡಿಸಿ ನಾಳೆ ಇಂದು ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಲಿದೆ.
ಅನುದಾನವನ್ನೇ ಕೊಡದ ಬ್ರ್ಯಾಂಡ್ ಬೆಂಗಳೂರು ನಮಗೆ ಬೇಡ. ಮಳೆ ನೀರು ಎಲ್ಲ ಮನೆಗಳಿಗೆ ನುಗ್ಗಿ ಅಪಾರ ಹಾನಿ ಆಗಿದೆ. ಈ ಸರ್ಕಾರ ಬಂದ ಬಳಿಕ ರಸ್ತೆ ಕಾಮಗಾರಿಗಳು ನಡೆದಿಲ್ಲ. ಹೊಸ ಕಾಮಗಾರಿಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ಕಾರ್ಯ ನಡೆದಿಲ್ಲ ಎಂದು ಟೀಕಿಸಿದರು. ಅಭಿವೃದ್ಧಿ ಕಾಮಗಾರಿಗಳನ್ನೇ ಮಾಡದ ಈ ಸರಕಾರದ ವಿರುದ್ಧ ಒಂದು ದೊಡ್ಡ ಪ್ರತಿಭಟನೆಯನ್ನು ಇಂದು ರಾಜ್ಯಾಧ್ಯಕ್ಷ ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರ ನೇತೃತ್ವದಲ್ಲಿ ನಡೆಯಲಿದೆ.
ಫ್ರೀಡಂ ಪಾರ್ಕಿನಲ್ಲಿ ಬೆಳಿಗ್ಗೆ 11 ಗಂಟೆಗೆ ನಡೆಯುವ ಹೋರಾಟದಲ್ಲಿ ಬಿಜೆಪಿಯ ಬೆಂಗಳೂರಿನ ಎಲ್ಲ ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು ಭಾಗವಹಿಸಲಿದ್ದಾರೆ. ಎಂದು ಬಿಜೆಪಿ ಪ್ರಕಟಣೆ ತಿಳಿಸಿದೆ.