ಓವರ್ ಟೇಕ್ ವಿಚಾರ : ಅನ್ಯ ಕೋಮಿನ ಯುವಕರ ತಂಡದಿಂದ ಹಿಂದೂ ಯುವಕನ ಮೇಲೆ ಹಲ್ಲೆ

ಮಂಡ್ಯ : ಓವ‌ರ್ ಟೇಕ್ ಮಾಡಲು ಹೋಗಿ ಬೈಕ್‌ಗೆ ಟಚ್ ಮಾಡಿರುವುದನ್ನು ಅಭಿಲಾಷ್ ಇಬ್ಬರು ಮುಸ್ಲಿಂ ಯುವಕರನ್ನು ಪ್ರಶ್ನಿಸಿದ್ದಾರೆ. ಇದೇ ದ್ವೇಷ ಇಟ್ಟುಕೊಂಡು ಮುಸ್ಲಿಂ ಯುವಕರ ಗುಂಪೊಂದು ಅಭಿಲಾಷ್ ಮೇಲೆ ಹಲ್ಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಡಲ ತಾಲೂಕಿನ ಬೆಳ್ಳೂರಿನಲ್ಲಿ ನಡೆದಿದೆ.

ಹಲ್ಲೆಯಿಂದ ಗಾಯಗೊಂಡಿರುವ ಅಭಿಲಾಷ್ ನನ್ನು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೊಂದೆಡೆ ಸ್ಥಳೀಯ ಮುಸ್ಲಿಂ ಯುವಕರ ವಿರುದ್ಧ ಗ್ರಾಮಸ್ಥರು ಆಕ್ರೋಶಗೊಂಡಿದ್ದು, ಆರೋಪಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಬೆಳ್ಳೂರು ಪೊಲೀಸ್‌ ಠಾಣೆ ಎದುರು ಪ್ರತಿಭಟನೆ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕ್ಷುಬ್ಧ ಪರಿಸ್ಥಿತಿ ಉಟಾಗಿದ್ದು, ಸ್ಥಳಕ್ಕೆ ಡಿವೈಎಸ್ಪಿ ಆಗಮಿಸಿ ಪ್ರತಿಭಟನೆಕಾರರ ಮನವೊಲಿಸುವ ಮೂಲಕ ಪರಿಸ್ಥಿತಿಯನ್ನು ನಿಯಂತ್ರಿಸಿದರು.

ಮುಸ್ಲಿಂ ಯುವಕರ ಗುಂಪು ಬೆಳ್ಳೂರಿನ ಸಂತೆ ಬೀದಿಯಲ್ಲಿ ಅತಿ ವೇಗದಲ್ಲಿ ಪಟ್ಟಣದೊಳಗೆ ಕಾರು ಓಡಿಸಿಕೊಂಡು ಹೋಗಿದೆ. ಅಲ್ಲದೇ ಓವರ್ ಟೇಕ್ ಮಾಡುವಾಗ ಬೈಕ್‌ಗೆ ಟಚ್ ಆಗಿದೆ. ಇದನ್ನು ಹಲ್ಲೆಗೆ ಒಳಗಾಗಿರುವ ಅಭಿಲಾಷ್ ಹಾಗೂ ಅವರ ಜೊತೆಗಾರ ನಾಗೇಶ್ ಪ್ರಶ್ನಿಸಿದ್ದರು. ಈ ವೇಳೆ ಸಣ್ಣ ಮಟ್ಟಿನ ಮಾತಿನ ಚಕಮಕಿ ನಡೆದಿತ್ತು. ಅದೇ ದ್ವೇಷವನ್ನು ಇಟ್ಟುಕೊಂಡಿದ್ದ ಮುಸ್ಲಿಂ ಯುವಕರು, ಇನ್ನಷ್ಟು ದೊಡ್ಡ ಗುಂಪನ್ನು ಕಟ್ಟಿಕೊಂಡು ಬಂದು ಅಭಿಲಾಷ್ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.

































 
 

ಹತ್ತಾರು ಜನರ ತಂಡ ಕಟ್ಟಿಕೊಂಡು ಬಂದು ಹಲ್ಲೆ ಮಾಡಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಕೆಲ ಹಿಂದೂಗಳ ಮನೆಗಳಿಗೆ ನುಗ್ಗಿ ಬೆದರಿಕೆ ಹಾಕಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಮಹಿಳೆಯರು ಸೇರಿದಂತೆ ಪೊಲೀಸ್ ಠಾಣೆ ಎದುರು ನೂರಾರು ಗ್ರಾಮಸ್ಥರು ಜಮಾವಣೆಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top