ಅಹಮದಾಬಾದ್: 3ನೇ ಮಗು ಹುಟ್ಟಿದಕ್ಕಾಗಿ ಇಬ್ಬರು ಬಿಜೆಪಿ ಸದಸ್ಯರು ತಮ್ಮ ಸದಸ್ಯತನ ಕಳೆದುಕೊಂಡಿದ್ದಾರೆ.
ಗುಜರಾತ್‌ನ ಅಮೇಲಿ ಜಿಲ್ಲೆಯ ದಾಮ್‌ನಗರ ನಗರಪಾಲಿಕೆಯ ಇಬ್ಬರು ಬಿಜೆಪಿ ಸದಸ್ಯರು ತಮ್ಮ ಸದಸ್ಯತ್ವ ಕಳೆದುಕೊಂಡಿರುವುದು.
ಖೀಮಾ ಕಸೋಟಿಯಾ ಮತ್ತು ಮೇಘನಾ ಬೋಖಾ ಅವರೇ ಅನರ್ಹಗೊಂಡ ಬಿಜೆಪಿ ಸದಸ್ಯರು. ಅನರ್ಹರಾದರೂ ನಗರಪಾಲಿಕೆ ಬಿಜೆಪಿ ತೆಕ್ಕೆಯಲ್ಲೇ ಇರಲಿದೆ. ಏಕೆಂದರೆ ಅಷ್ಟು ಬಹುಮತ ಬಿಜೆಪಿಗೆ ಇದೆ. 2005-06 ರಲ್ಲಿ ಆಗಿನ ಗುಜರಾತ್ ಮುಖ್ಯ ಮಂತ್ರಿ ನರೇಂದ್ರ ಮೋದಿ 1963ರ ಮುನ್ಸಿಪಲ್ ಕಾಯಿದೆಗೆ ತಿದ್ದುಪಡಿ ಮಾಡಿ ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ ಯಾವುದೇ ವ್ಯಕ್ತಿ ಪಂಚಾಯತ್, ಪುರಸಭೆಗಳು ಮತ್ತು ಮುನ್ಸಿಪಲ್ ಕಾರ್ಪೊರೇಶನ್‌ಗಳಿಗೆ ಚುನಾವಣೆಯಲ್ಲಿ ಸ್ಪರ್ಧಿಸುವುದನ್ನು ನಿಷೇಧಿಸಿದ್ದರು.