ಲಕ್ನೋ: ಅಯೋಧ್ಯೆಯ ರಾಮಮಂದಿರವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ 14 ವರ್ಷದ ಬಾಲಕ ಹಾಗೂ ಆತನ ಅಜ್ಜಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
ಬಾಲಕ ಮಂಗಳವಾರ ರಾತ್ರಿ ಪೊಲೀಸ್ ಕಂಟ್ರೋಲ್ ರೂಮ್ನ ತುರ್ತು ಸಹಾಯವಾಣಿ 112ಕ್ಕೆ ಕರೆಮಾಡಿ, ಮಂದಿರವನ್ನು ಬಾಂಬ್ನಿಂದ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದಾನೆ. ಬಳಿಕ ಪೊಲೀಸರು ಸೈಬರ್ ಸೆಲ್ ಸಹಾಯದಿಂದ ಆರೋಪಿಗಳಿರುವ ಸ್ಥಳವನ್ನು ಪತ್ತೆಹಚ್ಚಿದ್ದಾರೆ.
ಇದೀಗ ಆರೋಪಿ ಬಾಲಕ ಹಾಗೂ ಆತನ ಅಜ್ಜಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಬಾಲಕ ಬುದ್ದಿಮಾಂದ್ಯತೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಕುಶಿನಗರ ಪೊಲೀಸ್ ವರಿಷ್ಠಾಧಿಕಾರಿ ಧವಲ್ ಜೈಸ್ವಾಲ್ ತಿಳಿಸಿದ್ದಾರೆ.