ವಿಟ್ಲ : ಪುತ್ತೂರು ಒಕ್ಕಲಿಗ ಗೌಡ ಸಮುದಾಯ ಪತ್ತಿನ ಸಹಕಾರ ಸಂಘದ 10ನೇ ಶಾಖೆ ವಿಟ್ಲ ಎಂಪಾಯರ್ ಮಾಲ್ ನಲ್ಲಿ ಜೂ.13 ರಂದು ಉದ್ಘಾಟನೆಗೊಳ್ಳಲಿದ್ದು, ಈ ಕುರಿತು ಆಡಳಿತ ಮಂಡಳಿ ಹಾಗೂ ವಿಟ್ಲ ನಾಗರಿಕರ ಪೂರ್ವಭಾವಿ ಸಭೆ ವಿಟ್ಲದಲ್ಲಿ ಇಂದು ನಡೆಯಿತು.
ಪುತ್ತೂರು ಒಕ್ಕಲಿಗ ಗೌಡ ಸಮುದಾಯ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿ ಸಭೆಯ ಅಧ್ಯಕ್ಷತೆ ವಹಿಸಿ ಮಾಹಿತಿ ನೀಡಿದರು.
ವಿಟ್ಲ ಒಕ್ಕಲಿಗ ಗೌಡ ಸೇವಾ ಸಂಘದ ಮಾಜಿ ಅಧ್ಯಕ್ಷ ಲಿಂಗಪ್ಪ ಗೌಡ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು.
ಪುತ್ತೂರು ಒಕ್ಕಲಿಗ ಗೌಡ ಸಮುದಾಯ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ಯು.ಪಿ.ರಾಮಕೃಷ್ಣ ಮಾತನಾಡಿ, ವಿಟ್ಲದಲ್ಲಿ ಉದ್ಘಾಟನೆಗೊಳ್ಳಲಿರುವ ಶಾಖೆಗೆ ಪುತ್ತೂರು ಒಕ್ಕಲಿಗ ಗೌಡ ಸಮುದಾಯ ಪತ್ತಿನ ಸಹಕಾರ ಸಂಘದಿಂದ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು.
ವೇದಿಕೆಯಲ್ಲಿ ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ರವಿ ಮುಂಗ್ಲಿಮನೆ, ವಿಟ್ಲ ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ಮೋನಪ್ಪ ಗೌಡ, ಗೌರವಾಧ್ಯಕ್ಷ ಮೋಹನ ಗೌಡ ಕಾಯರ್ ಮಾರ್, ಒಕ್ಕಲಿಗ ಗೌಡ ಮಹಿಳಾ ಸಂಘದ ಅಧ್ಯಕ್ಷೆ ಅಮಿತಾ ಗೋಪಾಲಕೃಷ್ಣ, ಉಪಸ್ಥಿತರಿದ್ದರು.
ಸಭೆಯಲ್ಲಿ ಪುತ್ತೂರು ಒಕ್ಕಲಿಗ ಗೌಡ ಸಮುದಾಯ ಪತ್ತಿನ ಸಹಕಾರ ಸಂಘದ ನಿರ್ದೇಶಕರಾದ ಪ್ರವೀಣ್ ಕುಂಟ್ಯಾಣ, ಜಿನ್ನಪ್ಪ ಗೌಡ ಮಳುವೇಲು ಸತೀಶ್ ಪಾಂಬಾರು, ಲೋಕೇಶ್ ಚಾಕೋಟೆ, ಪಿ.ಆರ್.ಒ. ಶ್ರೀಧರ ಗೌಡ ಕಣಜಾಲು, ಪುತ್ತೂರು ಯುವ ಒಕ್ಕಲಿಗ ಗೌಡ ಸಂಘದ ಅಧ್ಯಕ್ಷ ಅಮರನಾಥ ಬಪ್ಪಳಿಗೆ, ಮ್ಯಾನೇಜರ್ ದಿನೇಶ್ ಪೆಲತ್ತಿಲ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಸಂಘದ ಸಿಇಒ ಸುಧಾಕರ ಸ್ವಾಗತಿಸಿದರು. ವಿಟ್ಲ ಶಾಖೆ ಉಸ್ತುವಾರಿ ರಾಮಕೃಷ್ಣ ಗೌಡ ಕರ್ಮಲ ವಂದಿಸಿದರು.