ಪುತ್ತೂರು: ವಿಧಾನಪರಿಷತ್ ಚುನಾವಣೆಯಲ್ಲಿ ನೈರುತ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ರಘುಪತಿ ಭಟ್ ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯಕ್ಕೆ ಶುಕ್ರವಾರ ಬೆಳಿಗ್ಗೆ ಭೇಟಿ ನೀಡಿದರು.
ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಸಾಮಾಜಿಕ ಹೋರಾಟಗಾರ ರಾಜಾರಾಂ ಭಟ್, ಪ್ರಮುಖರಾದ ನವೀನ್ ಕುಲಾಲ್, ಶಿವ ಭಟ್ ಉಪಸ್ಥಿತರಿದ್ದರು. ಇಂದು ಪುತ್ತೂರಿನಾದ್ಯಂತ ಶಾಲಾ ಕಾಲೇಜು, ಪದವೀಧರರನ್ನು ಭೇಟಿಯಾಗಿ ಮತಯಾಚನೆ ನಡೆಸಲಿದ್ದಾರೆ.