ಪುತ್ತೂರು: ಬನ್ನೂರು ಗ್ರಾಮದ ಅಲುಂಬುಡ ಎಂಬಲ್ಲಿ ಕಾರ್ಯಾಚರಿಸುತ್ತಿರುವ ಎವಿಜಿ ಇಂಗ್ಲಿಷ್ ಮೀಡಿಯಂ ಸ್ಕೂಲ್ ನ ‘ಆರಂಭ – 2024’ ಜೂ.3 ಸೋಮವಾರ ಬೆಳಿಗ್ಗೆ 9.30 ಕ್ಕೆ ನಡೆಯಲಿದೆ.
ಶಾಲಾ ಆರಂಭದ ಅಂಗವಾಗಿ ಬೆಳಿಗ್ಗೆ 7 ರಿಂದ ಗಣಪತಿ ಹೋಮ, ಸರಸ್ವತಿ ಪುಜೆ, 9.30 ರಿಂದ ತರಗತಿ ವಿದ್ಯಾರ್ಥಿಗಳ ಪ್ರವೇಶೋತ್ಸವ ನಡೆಯಲಿದೆ. 10 ಕ್ಕೆ ಸತ್ಯನಾರಾಯಣ ಪೂಜೆ, 11.30 ಕ್ಕೆ ಶೈಕ್ಷಣಿಕ ಚಿಂತನೆ, ಮಧ್ಯಾಹ್ನ 12.30 ರಿಂದ ಎವಿಜಿ ಇಂಗ್ಲಿಷ್ ಮೀಡಿಯಂ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.
ಸಭಾ ಕಾರ್ಯಕ್ರಮದಲ್ಲಿ ಬನ್ನೂರು ಎವಿಜಿ ಆಂಗ್ಲಮಾಧ್ಯಮ ಶಾಲಾ ಅಧ್ಯಕ್ಷ ವೆಂಕಟ್ರಮಣ ಗೌಡ ಕಳುವಾಜೆ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಪುತ್ತೂರು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಯ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜ, ಸಂಪ್ಯ ಅಕ್ಷಯ ಕಾಲೆಜು ಅಧ್ಯಕ್ಷ ಜಯಂತ ನಡುಬೈಲು ಪಾಲ್ಗೊಳ್ಳಲಿದ್ದಾರೆ.
ಸುಳ್ಯ ಶಾರದಾ ಮಹಿಳಾ ಪದವಿಪೂರ್ವ ಕಾಲೇಜು ಪ್ರಾಂಶುಪಾಲೆ ದಯಾಮಣಿ ಕೆ ಶ್ಯಕ್ಷಣಿಕ ಚಿಂತನೆ ನಡೆಸಲಿದ್ದಾರೆ. ಎವಿಜಿ ಆಂಗ್ಲಮಾಧ್ಯಮ ಶಾಲಾ ಸಂಚಾಲಕ ಎ.ವಿ ನಾರಾಯಣ, ಕಾರ್ಯದರ್ಶಿ ಗುಡ್ಡಪ್ಪ ಗೌಡ ಬಲ್ಯ, ಉಪಾಧ್ಯಕ್ಷ ಉಮೇಶ್ ಮಳುವೇಲು ಗೌರವ ಉಪಸ್ಥಿತರಿರಲಿದ್ದಾರೆ. ಈ ಸಂದರ್ಭದಲ್ಲಿ ಕಾಣಿಯೂರು ಪ್ರಗತಿ ಪ್ರೌಢಶಾಲಾ ಸಂಚಾಲಕ ಜಯಸೂರ್ಯ ರೈ ಮಾದೋಡಿ ಅವರನ್ನು ಸನ್ಮಾನಿಸಲಾಗುವುದು ಎಂದು ಸಂಸ್ಥೆಯ ಸಂಚಾಲಕ ಎ.ವಿ.ನಾರಾಯಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.