ಸಹೋದ್ಯೋಗಿ ಮಹಿಳೆಗೆ ಮಾನಸಿಕ, ಲೈಂಗಿಕ ಕಿರುಕುಳ | ಪ್ರಕರಣ ದಾಖಲು

ಉಡುಪಿ: ಸಹೋದ್ಯೋಗಿ ವೈದ್ಯ ಮಹಿಳೆಗೆ ಲೈಂಗಿಕ ಹಾಗೂ ಮಾನಸಿಕ ಕಿರುಕುಳ ನೀಡುತ್ತಿದ್ದಾನೆ ಎಂದು ದೂರು ನೀಡಿದ ಹಿನ್ನಲೆಯಲ್ಲಿ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಳೆದ ಆರು ತಿಂಗಳಿಂದ ತನಗೆ ಹಗಲು ರಾತ್ರಿಯೆನ್ನದೇ ವೈದ್ಯಾಧಿಕಾರಿಯೊಬ್ಬ ಲೈಂಗಿಕ ಮತ್ತು ಮಾನಸಿಕ ಕಿರುಕುಳ ನೀಡುತ್ತಿದ್ದಾನೆ ಎಂದು ಕುಂದಾಪುರ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ, ರಾಬರ್ಟ್ ರೆಬೆಲ್ಲೋ ವಿರುದ್ಧ ಮಾನಭಂಗಕ್ಕೆ ಯತ್ನ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ.

ಕುಂದಾಪುರದ ಸರ್ಕಾರಿ ತಾಲೂಕು ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ರಾಬರ್ಟ್ ರೆಬೆಲ್ಲೋ ವಿರುದ್ಧ ಹಿಂದಿನಿಂದಲೇ ಹಲವು ಆರೋಪಗಳಿದ್ದವು. ಇದೀಗ ತನ್ನ ಆಸ್ಪತ್ರೆಯಲ್ಲಿರುವ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಕಳೆದ ಆರು ತಿಂಗಳಿನಿಂದ ಲೈಂಗಿಕ ಕಿರುಕುಳ, ಮಾನಸಿಕ ಹಿಂಸೆ ಹಾಗೂ ಮಾನಭಂಗಕ್ಕೆ ಯತ್ನಿಸಿದ್ದಾಗಿ ಮಹಿಳೆ ಗುರುವಾರ ಕುಂದಾಪುರ ಪೊಲೀಸರಿಗೆ ದೂರು ನೀಡಿದ್ದು, ಅದರಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದೀಗ ಆರೋಪಿ ವಿರುದ್ಧ ಸಾರ್ವಜನಿಕರು ಆಕ್ರೋಶಿತರಾಗಿದ್ದು, ಆರೋಪಿ ರಾಬರ್ಟ್ ರೆಬೆಲ್ಲೋ ಬಂಧಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ್ದಾರೆ.





























 
 

ಕರ್ತವ್ಯದ ಸಮಯ ಮುಗಿದ ಮೇಲೆ ರಾತ್ರಿ 10-11 ಗಂಟೆಯ ನಂತರದಲ್ಲಿ ಅಶ್ಲೀಲ ಮೆಸೇಜ್‌ಗಳನ್ನು ಕಳುಹಿಸಿ ತನ್ನೊಂದಿಗೆ ಸಹಕರಿಸು ಎಂದು ಕಿರುಕುಳ ನೀಡುತ್ತಿದ್ದ. ಕರ್ತವ್ಯದ ಸಮಯವೂ ಲಂಚ್‌ಗೆ, ಡಿನ್ನರ್‌ಗೆ ಬಾ ಎಂದು ಪೀಡಿಸಿ ಪುಸಲಾಯಿಸುತ್ತಿದ್ದು ಆತನ ಕೋರಿಕೆಗಳನ್ನು ನಿರಾಕರಿಸಿದ್ದರಿಂದ ಹತಾಶೆಗೊಳಗಾಗಿ ಅವಾಚ್ಯವಾಗಿ ನಿಂದಿಸಿ, ಜೀವಬೆದರಿಕೆ ಹಾಕಿದ್ದಲ್ಲದೆ ಬಳಿಕ ಮೊಬೈಲ್‌ನಲ್ಲಿದ್ದ ಫೋಟೊ ವಿಡಿಯೋ ಹಾಗೂ ಮೆಸೇಜ್‌ಗಳನ್ನು ಡಿಲೀಟ್‌ ಮಾಡುವಂತೆ ಒತ್ತಾಯಿಸಿ ಬೆದರಿಕೆ ಹಾಕಿದ್ದಾಗಿ ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top