ಬೆಳ್ತಂಗಡಿ: ಉಜಿರೆಯ ಎಸ್.ಡಿ ಎಂ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿಯೋರ್ವಳು ನಾಪತ್ತೆಯಾದ ಬಗ್ಗೆ ವರದಿಯಾಗಿದೆ.
ಕ್ರೀಡಾ ವಸತಿ ಶಾಲೆಯ ಪ್ರಥಮ ಪಿ.ಯು.ಸಿ ವಿಧ್ಯಾರ್ಥಿ ಬೇಲೂರಿನ ದಿವ್ಯಾ ನಾಪತ್ತೆಯಾದವಳು.
ಮೇ 29ರಂದು ಬೆಳಿಗ್ಗೆ ಕ್ರೀಡಾಂಗಣಕ್ಕೆ ಹೋಗಿ ಬರುವುದಾಗಿ ಹೇಳಿ ನಿಲಯ ಪಾಲಕರಲ್ಲಿ ತಿಳಿಸಿ ಹೋದವಳು ಹಾಸ್ಟೆಲ್ ಗೂ ಹಿಂತಿರುಗದ ಮನೆಗೂ ಹೋಗದೆ ನಾಪತ್ತೆಯಾಗಿದ್ದಾಳೆ ಎಂದು ತಿಳಿದು ಬಂದಿದೆ. ಉಜಿರೆ ಶ್ರೀ ಧರ್ಮಸ್ಥಳ ಕ್ರೀಡಾ ವಸತಿ ನಿಲಯದ ಸಹಾಯಕ ನಿಲಯ ಪಾಲಕಿ ನೀಡಿರುವ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
























