ಬೆಂಗಳೂರು: ಎಐಸಿಸಿ ರಾಷ್ಟ್ರೀಯ ಸಂಯೋಜಕಿ ಭವ್ಯ ನರಸಿಂಹ ಮೂರ್ತಿ ಭಾರತೀಯ ಪ್ರಾದೇಶಿಕ ಸೇನೆಯಲ್ಲಿ ಕಮಿಷನರ್ ಆಫೀಸರ್ ಆಗಿ ನಿಯೋಜನೆಗೊಂಡಿದ್ದಾರೆ.
ಅವರು ಕಾಶ್ಮೀರದಲ್ಲಿ ಭಾರತ ಪಾಕಿಸ್ಥಾನ ಗಡಿಯ ಬಳಿಯಿರುವ ಭಾರತೀಯ ಸೇನಾ ಘಟಕದಲ್ಲಿ ತರಬೇತಿ ಪಡೆದು ಲೆಫ್ಟಿನಂಟ್ ಆಗಿ ಇದೀಗ ಯೋಜನೆಗೊಂಡಿದ್ದಾರೆ.
ದಕ್ಷಿಣ ಭಾರತದಿಂದ ಆಯ್ಕೆಯಾಗಿರುವ ಮೊದಲ ಮಹಿಳಾ ಪ್ರಾದೇಶಿಕ ಸೇನಾ ಅಧಿಕಾರಿ ಹಾಗೂ 2022 ಸಾಲಿನ ಪರೀಕ್ಷೆಯಲ್ಲಿ ಆಯ್ಕೆಯಾದ ಏಕೈಕ ಮಹಿಳಾ ಪ್ರಾದೇಶಿಕ ಸೇನಾ ಅಧಿಕಾರಿಯಾಗಿದ್ದೇನೆ ಎಂದು ಹೆಮ್ಮೆಯಾಗುತ್ತಿದೆ. ಇನ್ನು ಮುಂದೆ ನಾನು ದೇಶದ ಒಳಗೆ ರಾಜಕಾರಣಿಯಾಗಿ ನನ್ನ ಜನರ ಸೇವೆ ಮಾಡುವುದರ ಜೊತೆಗೆ ಭಾರತೀಯ ಸೇನಾಧಿಕಾರಿಯಾಗಿ ನನ್ನ ದೇಶ ಕರೆದಾಗ ಗಡಿಯಲ್ಲಿ ದೇಶದ ರಕ್ಷಣೆ ಮಾಡಲೂ ಸಿದ್ಧಳಾಗಿದ್ದೇನೆ ಎಂದು ಭವ್ಯ ನರಸಿಂಹ ಮೂರ್ತಿ ಪ್ರತಿಕ್ರಿಯೆ ನೀಡಿದ್ದಾರೆ.
ಪ್ರಸ್ತುತ ಪ್ರಾದೇಶಿಕ ಸೇನೆಯಲ್ಲಿ ಕೆಲ ಪ್ರಮುಖ ವ್ಯಕ್ತಿಗಳು ಕರ್ತವ್ಯ ನಿರ್ವಹಿಸುತ್ತಿದ್ದು, ಅವರಲ್ಲಿ ಕ್ರಿಕೆಟ್ ಆಟಗಾರ ಎಂ ಎಸ್ ಧೋನಿ, ರಾಜಸ್ಥಾನದ ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್, ಮಾಜಿ ಕೇಂದ್ರ ಸಚಿವ ಅನುರಾಗ ಥಾಕುರ್ ಸೇರಿದ್ದಾರೆ.